ಜನ ಮನದ ನಾಡಿ ಮಿಡಿತ

Advertisement

ಹರಿಯಾಣ: ಹರಿಯಾಣದಲ್ಲಿ ಭೀಕರ ದುರಂತ; ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರ ಸಾವು!

ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ಗುರುಗ್ರಾಮ್ ಜಿಲ್ಲೆಯಲ್ಲಿ ನಡೆದಿದೆ.

ಗುರುಗ್ರಾಮ್‌ನ ಸಿಧ್ಯಾವಲಿ ಗ್ರಾಮದ ಬಳಿ ಇರುವ `ಸಿನ್ನೇಚರ್ ಗ್ಲೋಬಲ್ ಸೊಸೈಟಿ’ ವಸತಿ ಯೋಜನೆಯ ನಿರ್ಮಾಣ ಸ್ಥಳದಲ್ಲಿ ಈ ದುರ್ಘಟನೆ ನಡೆದಿದ್ದು, ಒಳಚರಂಡಿ ಸಂಸ್ಕರಣಾ ಘಟಕದ ಕಾಮಗಾರಿ ನಡೆಯುತ್ತಿದ್ದಾಗ ಮಣ್ಣು ಕುಸಿದು ಕಾಂಕ್ರೀಟ್ ಗೋಡೆ ಬಿತ್ತು. ಇದರಿಂದ ಅಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 12 ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಮೃತರನ್ನು ಸತೀಶ್, ಭಾಗೀರಥ್, ಮಿಲನ್, ಶಿವ ಶಂಕರ್, ಮಂಗಲ್ ಮತ್ತು ಪರಮೇಶ್ವರ್ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಕಾರ್ಮಿಕನ ಗುರುತು ಪತ್ತೆ ಆಗಿಲ್ಲ. ಗಾಯಗೊಂಡಿರುವ ಐವರು ಕಾರ್ಮಿಕರನ್ನು ಚಿಕಿತ್ಸೆಗಾಗಿ ರಾಜಸ್ಥಾನದ ಭಿವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!