ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಬೆಂಗಳೂರುನಿಂದ ಪುತ್ತೂರಿಗೆ ಬರುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಸಾವಿರಾರು ರೂ.ಮೌಲ್ಯದ ಸೊತ್ತುಗಳು ಕಳವಾದ ಘಟನೆಯೊಂದು ನಡೆದಿದೆ.
ಪುಣಚ ಗ್ರಾಮದ ಅಜೇರು ನಿವಾಸಿ ದಿವಾಕರ ನಾಯಕ್ ಎಂಬವರ ಪುತ್ರಿ ದೀಪಿಕಾ ಅವರ ಬ್ಯಾಗ್‌ನಿಂದ ಲ್ಯಾಪ್‌ಟಾಪ್, ಸ್ಯಾಮ್‌ಸಂಗ್ ಕಂಪೆನಿಯ ಮೊಬೈಲ್, ಡೇನಿಯಲ್ ಕ್ಲೀನ್ ಕಂಪೆನಿಯ ವಾಚ್ ಸಹಿತ ಒಟ್ಟು ರೂ.53 ಸಾವಿರ ಮೌಲ್ಯದ ಸೊತ್ತು ಕಳವಾಗಿದೆ. ಬೆಂಗಳೂರಿನ ಟಿಸಿಎಸ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ದೀಪಿಕಾ , ಜು.26ರಂದು ರಾತ್ರಿ ಬೆಂಗಳೂರಿನಿಂದ ಪುತ್ತೂರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದರು. ಪುತ್ತೂರಿಗೆ ತಲುಪಿದಾಗ ಬೊಳುವಾರ್ ಎಂಬಲ್ಲಿ ಬ್ಯಾಗ್ ನೋಡಿದಾಗ ಸೊತ್ತುಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…