ಉಪ್ಪಿನಂಗಡಿಯ ರಾ ಹೆ 75 ರ ಸರ್ವೀಸ್ ರಸ್ತೆಯಲ್ಲಿ ಕಾರೊಂದಕ್ಕೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾದಲ್ಲಿದ್ದ ಐವರು ವಿದ್ಯಾರ್ಥಿಗಳು ಸೇರಿದಂತೆ 6 ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.
ಉಪ್ಪಿನಂಗಡಿಯ ಸರಕಾರಿ ಮಾದರಿ ಶಾಲಾ ವಿದ್ಯಾರ್ಥಿಗಳಾದ ಮಹಮ್ಮದ್ ಜಾಝೀಬ್, ಮಹಮ್ಮದ್ ಇರ್ಷಾದ್, ನೂರ್ ಮಹಮದ್, ಮಹಮದ್ ರಾಝೀಲ್, ಸಜ್ಮಾ ಮತ್ತು ರಿಕ್ಷಾ ಚಾಲಕ ಕಲಂದರ್ ಶಾಫಿ ಎಂಬವರು ಗಾಯಗೊಂಡವರು. 34 ನೇ ನೆಕ್ಕಿಲಾಡಿ ನಿವಾಸಿಗರಾದ ಇವರುಗಳನ್ನು ಕಲಂದರ್ ಶಾಫಿಯವರು ಎಂದಿನಂತೆ ತನ್ನ ರಿಕ್ಷಾದಲ್ಲಿ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಗಾಯಗೊಂಡ ಗಾಯಾಳುಗಳನ್ನು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಹಾಗೂ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…