ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ನಡೆದಿದೆ.
ಈ ಮಧ್ಯೆ ಸ್ಪೋಟವಾಗದೆ ಬಾವಿಯೊಳಗೆ ಉಳಿದಿರುವ ಮದ್ದುಗುಂಡುಗಳನ್ನು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ. ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮೈಸೂರು ನಿವಾಸಿ ಸೋಮಶೇಖರ ಎಂಬವರು ತಮ್ಮ ಸಂಬಂಧಿಕರಿಂದ 23 ಸೆಂಟ್ಸ್ ಜಾಗ ಖರೀದಿಸಿದ್ದು ಅದರಲ್ಲಿ ಅಡಿಕೆ ಮರಗಳಿವೆ.
ಈ ಜಾಗದಲ್ಲಿ ನೀರಿಗಾಗಿ ಬಾವಿ ತೋಡಿದ್ದು ಸುಮಾರು 15 ಅಡಿ ಆಳದಲ್ಲಿ ಕಲ್ಲು ಸಿಕ್ಕಿದ ಹಿನ್ನೆಲೆಯಲ್ಲಿ ಸ್ಪೋಟಕ ಬಳಸಿ ತೋಡಲು ಮುಂದಾಗಿದ್ದಾರೆ. ಅದರಂತೆ ಮಾ. 8ರಂದು ಸ್ಪೋಟಕ ಸಿಡಿಸಿದ್ದು ಇದರಿಂದ ಸಮೀಪದ ವಾಮನ ಮೂಲ್ಯ, ಕೆ.ಟಿ.ಮೋಹನ ಎಂಬವರ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ.
ಈ ಬಗ್ಗೆ ಅವರು ಕಡಬ ಪೊಲೀಸರಿಗೆ ದೂರು ನೀಡಿದ್ದರು. ಅದೇ ದಿನ ಸ್ಥಳಕ್ಕೆ ಆಗಮಿಸಿದ ಕಡಬ ಠಾಣೆ ಸಬ್ ಇನ್ಸಪೆಕ್ಟರ್ ಜಂಬೂರಾಜ್ ಮಹಾಜನ್ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…