ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿದಿನ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು, ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಬೇಯಿಸುವ ತಿನಿಸು ಬದಲಾಗಿ, ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ. ದೇವಸ್ಥಾನದಲ್ಲಿ ಮುಂದಿನ ಮೂರು ದಿನಕ್ಕೆ ಬೇಕಾಗುವಷ್ಟು ಗ್ಯಾಸ್ ಲಭ್ಯವಿದ್ದು, ಬಳಿಕದಲ್ಲೂ ಪೊರೈಕೆ ಆಗದೇ ಇದ್ದಲ್ಲಿ ಸಮಸ್ಯೆ ಆಗಲಿದೆ ಎನ್ನಲಾಗಿದ್ದು, ಈಗಾಗಲೇ ಗ್ಯಾಸ್ ಪೊರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೊರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೂ ಪೊರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದ್ದು, ಬದಲಾವವಣೆ ಮಾಡುವುದಿದ್ದಲ್ಲಿ ಈ ಬಗ್ಗೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುತ್ತದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…