ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಕಂಬಳ ಕ್ಷೇತ್ರದಲ್ಲಿ ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಹೋರಾಟಕ್ಕೆ ಜಯ: ಮುಚ್ಚೂರು ಲೋಕೇಶ್ ಶೆಟ್ಟಿ

ಕಂಬಳ ಕೇವಲ ಕರಾವಳಿ ಭಾಗಕ್ಕೆ ಮಾತ್ರ ಸೀಮಿತವಲ್ಲ, ಅದು ಇಡೀ ದೇಶದ ಹೆಮ್ಮೆ ಎಂದು ಸಾರುವ ಮೂಲಕ ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪನ್ನು ನೀಡಿದೆ.

ಈ ತೀರ್ಪನ್ನು ಕಂಬಳದ ಇತಿಹಾಸದಲ್ಲಿ ಒಂದು “ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ” ಎಂದು ರಾಜ್ಯ ಕಂಬಳ ಅಸೋಸಿಯೇಶನ್ ಕೋಶಾಧಿಕಾರಿ ಮುಚ್ಚೂರು ಕಲ್ಕುಡೆ ಲೋಕೇಶ್ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ. ಕಂಬಳದ ಉಳಿವಿಗಾಗಿ ಹೋರಾಡಿದ ಕಂಬಳ ಅಸೋಶಿಯೇಶನ್, ಸಮಿತಿ, ಎಲ್ಲ ಕಂಬಳದ ವ್ಯವಸ್ಥಾಪಕರು, ಕೋಣಗಳ ಯಜಮಾನರು, ಅಭಿಮಾನಿಗಳು ಮತ್ತು ಕಂಬಳ ಪ್ರೇಮಿಗಳ ದಶಕಗಳ ಶ್ರಮಕ್ಕೆ ನ್ಯಾಯ ಸಿಕ್ಕಿದೆ. ವಿಶೇಷವಾಗಿ ರಾಜ್ಯ ಕಂಬಳ ಅಸೋಶಿಯೇಶನ್ ಅಧ್ಯಕ್ಷ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ, ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ಮತ್ತು ನೇತೃತ್ವದಲ್ಲಿ ನಡೆದ ಕಾನೂನು ಹೋರಾಟ ಮತ್ತು ಸಂಘಟನೆಗೆ ದೊಡ್ಡ ಮಟ್ಟದ ಯಶಸ್ಸು ದೊರೆತಿದೆ. ಬೆಂಗಳೂರು ಮತ್ತು ಶಿವಮೊಗ್ಗ ಜೆಲ್ಲೆಗಳಲ್ಲೂ ಕಂಬಳ ನಡೆಸಲು ಎದುರಾಗಿದ್ದ ಅಡೆತಡೆಗಳು ಈಗ ನಿವಾರಣೆಯಾದಂತಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!