ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ರೂಪಾಯಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಮಾರ್ಚ್ 9ರಂದು ಮುಂಜಾನೆ ಸುಮಾರು 3 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿಸಿದ ಜಾಮ್‌ನಗರ -ತಿರುನಲ್ವೇಲಿ ಜಂಕ್ಷನ್ ಎಕ್ಸ್ಪ್ರೆಸ್ ರೈಲಿನಲ್ಲಿ ತಪಾಸಣೆ ಕೈಗೊಳ್ಳಲಾಗಿದೆ. ರೈಲಿನ ಸಾಮಾನ್ಯ ಬೋಗಿಯ ಮೇಲಿನ ಲಗೇಜ್ ರಾಕ್‌ನಲ್ಲಿ ವಾರೀಸುದಾರರು ಇಲ್ಲದ ಮೂರು ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ನೂರಾರು ಬಳಕೆಯಾದಂತಹ ಮೊಬೈಲ್‌ಗಳು ಪತ್ತೆಯಾಗಿವೆ. ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಆರ್‌ಪಿಎಫ್ ಹೆಡ್ ಕಾನ್ಸ್ಟೇಬಲ್ ಸುಜೀಶ್ ಮತ್ತು ಕಾನ್ಸ್ಟೇಬಲ್ ರಾಮಕೃಷ್ಣ ಅವರು ತಪಾಸಣೆ ಕೈಗೊಂಡು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಚುನಾವಣಾ ಸಮಯದಲ್ಲಿ ನಗದು, ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳ ಅಕ್ರಮ ಸಾಗಾಟವನ್ನು ಪತ್ತೆಹಚ್ಚುವುದಕ್ಕಾಗಿ ತಪಾಸಣಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ರೈಲು ನಿಲ್ದಾಣದ ಸಿಸಿಟಿವಿ ಇನ್ನಿತರ ದೃಶ್ಯಗಳನ್ನು ಪರಿಶೀಲಿಸಿದಾಗ, ಬ್ಯಾಗ್‌ಗಳು ಪತ್ತೆಯಾದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬAದಿದೆ. ಹೀಗಾಗಿ ಅಪರಾಧ ವಿಭಾಗದ ಗುಪ್ತಚರ ದಳ ಮತ್ತು ರೈಲ್ವೆ ಪೊಲೀಸರು ಇಬ್ಬರು ಶಂಕಿತರಿಗಾಗಿ ಶೋಧ ನಡೆಸುತ್ತಿದ್ದಾರೆ. ಮೊಬೈಲ್‌ಗಳನ್ನು ಎಲ್ಲಿಗೆ, ಯಾವ ಉದ್ದೇಶಕ್ಕಾಗಿ ಒಯ್ಯಲಾಗುತ್ತಿತ್ತು. ಇದರ ಹಿಂದೆ ಯಾರಿದ್ದಾರೆ ಎನ್ನುವುದರ ಬಗ್ಗೆ ತನಿಖೆ ಆಗಬೇಕಷ್ಟೆ.
ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯ ರಾಜಘಾಟ್‌ಗೆ ತೆರಳಿ ಪುಷ್ಪ ನಮನ…
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…