ಅಕ್ರಮವಾಗಿ ಮನೆಯಲ್ಲಿ ಎಮ್‌ಡಿಎಮ್‌ಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೋಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಬಂಧಿತರಿಂದ ರೂ 1,79,700/- ಅಂದಾಜು ಮೌಲ್ಯದ 17.97 ಗ್ರಾಂ ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ನಿವಾಸಿ ಅಶ್ರಫ್ ಜಿ (38), ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್ ಎ ಎಂಬವರನ್ನು ಬಂಧಿಸಲಾಗಿದೆ. ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಪ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಮ್.ಡಿ.ಎಮ್.ಎ ಯನ್ನು ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿಯ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ ರ ತಂಡ ದಾಳಿ ನಡೆಸಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…