ಜನ ಮನದ ನಾಡಿ ಮಿಡಿತ

Advertisement

ಪಡೀಲ್: ಬೈಕ್ ಗೆ ಗೂಡ್ಸ್ ಟೆಂಪೋ ಡಿ*ಕ್ಕಿ; ಯುವಕ ಮೃ*ತ್ಯು..!

ಗೂಡ್ಸ್ ಟೆಂಪೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ಸಂಭವಿಸಿದೆ.

ಸಚ್ಚೇರಿಪೇಟೆಯ ಕುದ್ರೋಟ್ ನಿವಾಸಿ ಸಜೇಶ್ ಪೂಜಾರಿ ಮೃತ ದುರ್ದೈವಿ. ಇವರು ಮಂಗಳೂರಿನ ಟಾಟಾ ಶೋರೂಮ್‌ನಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ತನ್ನ ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪಡೀಲ್ ಸಮೀಪ ತಿರುವಿನಲ್ಲಿ ಟೆಂಪೋ ಡಿಕ್ಕಿ ಹೊಡೆದಿದ್ದು, ಬೈಕ್ ಸಮೇತ ರಸ್ತೆಗೆ ಬಿದ್ದ ಸಜೇಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸಜೇಶ್ ಅವರು ಸಣ್ಣ ವಯಸ್ಸಿನಲ್ಲೇ ತಂದೆ ತಾಯಿಯನ್ನು ಕಳೆದುಕೊಂಡಿದ್ದರು. ಐದು ತಿಂಗಳ ಹಿಂದೆಯಷ್ಟೇ ಹೊಸ ಮನೆಯೊಂದನ್ನು ಕಟ್ಟಿ ಒಬ್ಬರೇ ವಾಸಿಸುತ್ತಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!