ಗೂಡ್ಸ್ ಟೆಂಪೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ಸಂಭವಿಸಿದೆ.
ಸಚ್ಚೇರಿಪೇಟೆಯ ಕುದ್ರೋಟ್ ನಿವಾಸಿ ಸಜೇಶ್ ಪೂಜಾರಿ ಮೃತ ದುರ್ದೈವಿ. ಇವರು ಮಂಗಳೂರಿನ ಟಾಟಾ ಶೋರೂಮ್‌ನಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ತನ್ನ ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪಡೀಲ್ ಸಮೀಪ ತಿರುವಿನಲ್ಲಿ ಟೆಂಪೋ ಡಿಕ್ಕಿ ಹೊಡೆದಿದ್ದು, ಬೈಕ್ ಸಮೇತ ರಸ್ತೆಗೆ ಬಿದ್ದ ಸಜೇಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಸಜೇಶ್ ಅವರು ಸಣ್ಣ ವಯಸ್ಸಿನಲ್ಲೇ ತಂದೆ ತಾಯಿಯನ್ನು ಕಳೆದುಕೊಂಡಿದ್ದರು. ಐದು ತಿಂಗಳ ಹಿಂದೆಯಷ್ಟೇ ಹೊಸ ಮನೆಯೊಂದನ್ನು ಕಟ್ಟಿ ಒಬ್ಬರೇ ವಾಸಿಸುತ್ತಿದ್ದರು ಎನ್ನಲಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…