ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಹಾಕಿಕೊಂಡು ಪರದಾಡುತ್ತಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ನಡೆದಿದೆ.
ಪರಿಸರದಲ್ಲಿ ಚೊಂಬು ತಲೆಗೆ ಹಾಕಿಕೊಂಡು ಒದ್ದಾಡುತ್ತಿದ್ದ ಮಂಗವನ್ನು ಸ್ಥಳಿಯ ಸಮಾಜ ಸೇವಕರು ಮತ್ತು ಪರಿಸರ ಪ್ರೇಮಿ ನವೀನ್ ಕುಮಾರ್ ಚಿತ್ರಬೈಲ್, ಸುಕೇಶ್, ಹರೀಶ್ ರಾಮ ಮತ್ತು ವಿಶ್ವನಾಥ ಎಂಬವರು ಗಮನಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಅವರು ಕೋತಿಯನ್ನು ಹಗ್ಗ ಕಟ್ಟಿ ಹಿಡಿದು, ಚಿತ್ರಬೈಲು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಕೋತಿಯ ತಲೆಯನ್ನು ನೀರಿನಲ್ಲಿ ಒದ್ದೆ ಮಾಡಿ ನಾಜೂಕಾಗಿ ಚೊಂಬನ್ನು ತಲೆಯಿಂದ ಬೇರ್ಪಡಿಸಿದ್ರು.
ಚೊಂಬು ತೆಗೆದ ತಕ್ಷಣ ಬದುಕಿದೆ ಜೀವ ಎಂಬಂತೆ ಕೋತಿ ಜಿಗಿದು ಓಡಿ ಮಾಯವಾಯಿತು. ಸ್ಥಳೀಯ ಯುವಕರ ಈ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…