ಜನ ಮನದ ನಾಡಿ ಮಿಡಿತ

Advertisement

ಬಳ್ಳಾರಿ: ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಗ್ರಾಮದ ಬಳಿ ಲಾರಿ ಹರಿದು ಅಜ್ಜ-ಮೊಮ್ಮಗಳು ದಾರುಣ ಸಾ*ವು..!

ಭೀಕರ ರಸ್ತೆ ಅಪಘಾತದಲ್ಲಿ ಅಜ್ಜ ಮತ್ತು ಮೊಮ್ಮಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಂಭವಿಸಿದೆ.

ಮೃತರನ್ನು 55 ವರ್ಷದ ಈಶ್ವರಪ್ಪ ಮತ್ತು ಅವರ 14 ವರ್ಷದ ಮೊಮ್ಮಗಳು ಸೃಷ್ಟಿ ಎಂದು ಗುರುತಿಸಲಾಗಿದೆ. ಈಕೆ ಕೂಡ್ಲಿಗಿ ಪಟ್ಟಣದ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಪರೀಕ್ಷೆ ಮುಗಿಸಿದ ಮೊಮ್ಮಗಳನ್ನು ಅಜ್ಜ ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ರಸ್ತೆಯ ಮೇಲೆ ಒಣಗಿಸಲು ಹಾಕಿದ್ದ ರಾಗಿಯ ಮೇಲೆ ಬೈಕ್ ಚಲಿಸಿದಾಗ ನಿಯಂತ್ರಣ ತಪ್ಪಿ ಜಾರಿ ಬಿದ್ದಿದೆ. ಬೈಕ್ ಸವಾರರು ಕೆಳಗೆ ಬಿದ್ದ ತಕ್ಷಣವೇ ಹಿಂದಿನಿಂದ ಬಂದ ತಮಿಳುನಾಡು ನೋಂದಣಿಯ ಕಂಟೈನರ್ ಲಾರಿ ಇವರ ಮೇಲೆ ಹರಿದಿದ್ದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೂಡ್ಲಿಗಿ ಪಿಎಸ್‌ಐ, ಸಿಸಿಪಿ ಪರಿಶಿಲನೆ ನಡೆಸಿದ್ದು, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!