ಭೀಕರ ರಸ್ತೆ ಅಪಘಾತದಲ್ಲಿ ಅಜ್ಜ ಮತ್ತು ಮೊಮ್ಮಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಂಭವಿಸಿದೆ.
ಮೃತರನ್ನು 55 ವರ್ಷದ ಈಶ್ವರಪ್ಪ ಮತ್ತು ಅವರ 14 ವರ್ಷದ ಮೊಮ್ಮಗಳು ಸೃಷ್ಟಿ ಎಂದು ಗುರುತಿಸಲಾಗಿದೆ. ಈಕೆ ಕೂಡ್ಲಿಗಿ ಪಟ್ಟಣದ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಪರೀಕ್ಷೆ ಮುಗಿಸಿದ ಮೊಮ್ಮಗಳನ್ನು ಅಜ್ಜ ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ರಸ್ತೆಯ ಮೇಲೆ ಒಣಗಿಸಲು ಹಾಕಿದ್ದ ರಾಗಿಯ ಮೇಲೆ ಬೈಕ್ ಚಲಿಸಿದಾಗ ನಿಯಂತ್ರಣ ತಪ್ಪಿ ಜಾರಿ ಬಿದ್ದಿದೆ. ಬೈಕ್ ಸವಾರರು ಕೆಳಗೆ ಬಿದ್ದ ತಕ್ಷಣವೇ ಹಿಂದಿನಿಂದ ಬಂದ ತಮಿಳುನಾಡು ನೋಂದಣಿಯ ಕಂಟೈನರ್ ಲಾರಿ ಇವರ ಮೇಲೆ ಹರಿದಿದ್ದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೂಡ್ಲಿಗಿ ಪಿಎಸ್‌ಐ, ಸಿಸಿಪಿ ಪರಿಶಿಲನೆ ನಡೆಸಿದ್ದು, ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…