ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಟ್ಯಾರು ಜಂಕ್ಷನ್ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಮಾರುತಿ ಸ್ವಿಫ್ಟ್ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮಾರುತಿ ಆಲ್ಟೋ ಕಾರು ಹಾಗೂ 5 ಬೈಕ್‌ಗಳಿಗೆ ಡಿಕ್ಕಿ ಹೊಡೆದು, ಆರೋಪಿ ಚಾಲಕ ಕಾರಿನೊಂದಿಗೆ ಪರಾರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆಗೆ ಸಂಬಧಿಸಿ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವಿಫ್ಟ್ ಕಾರು ಆರಂಭದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಬೈಕ್ ಸಹಸವಾರ ಬಂಟ್ವಾಳದ ನಿವಾಸಿ ರವಿ ಬಿ ಅವರು ಘಟನೆಗೆ ಸಂಬಂಧಿಸಿ ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗುರುವಾರ ಸಂಜೆ ಕಾರ್ತಿಕ್ ಎಂಬವರ ಬೈಕಿನಲ್ಲಿ ರವಿ ಹಾಗೂ ಕಾರ್ತಿಕ್ ಅವರು ಸವಾರನಾಗಿ, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಟ್ಯಾರ್ ಜಂಕ್ಷನ್ ಬಳಿಗೆ ತಲುಪಿದಾಗ, ಹಿಂದಿನಿಂದ ಬಂದ ಕಾರು ಅದರ ಚಾಲಕನು ತೀರಾ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ರವಿ ಮತ್ತು ಸವಾರ ಕಾರ್ತಿಕ್ ಅವರು ರಸ್ತೆಗೆ ಎಸೆಯಲ್ಪಟ್ಟು ಗಾಯವಾಗಿದೆ.
ಬಳಿಕ ಅಪಘಾತ ಎಸಗಿದ ಆರೋಪಿ ಕಾರು ಚಾಲಕನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ 5 ಬೈಕ್‌ಗಳಿಗೆ ಡಿಕ್ಕಿ ಹೊಡೆದಿದ್ದು, ಆ ಬೈಕ್‌ಗಳು ಜಖಂಗೊಂಡಿವೆ ಎಂದು ರವಿ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸಂಪ್ಯ ಠಾಣೆಯ ಪೊಲೀಸರು ಆರೋಪಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಲ್ಟೋ ಕಾರು ಮತ್ತು 5 ಬೈಕ್‌ಗಳಿಗೆ ಡಿಕ್ಕಿ ಹೊಡೆದ ಕಾರಿನ ಚಾಲಕ ಪುತ್ತೂರಿನ ವಿದ್ಯಾಸಂಸ್ಥೆಯೊಂದರಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ ಅರಿಯಡ್ಕ ಗ್ರಾಮ ವ್ಯಾಪ್ತಿಯ ಅಪ್ರಾಪ್ತ ಬಾಲಕನೆಂಬ ಮಾಹಿತಿ ಲಭಿಸಿದೆ. ಆರಂಭದಲ್ಲಿ ಮುಂದಿನಿಂದ ತೆರಳುತ್ತಿದ್ದ ಬೈಕೊಂದಕ್ಕೆ ಡಿಕ್ಕಿ ಹೊಡೆದ ವೇಳೆ ಆತ ಗಾಬರಿಗೊಂಡ ಪರಿಣಾಮವಾಗಿ ಕಾರು ನಿಯಂತ್ರಣ ಕಳಕೊಂಡು ಯದ್ವಾತದ್ವ ಚಲಿಸಿದೆ ಎಂದು ಮಾಹಿತಿ ಲಭಿಸಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…