ಜನ ಮನದ ನಾಡಿ ಮಿಡಿತ

Advertisement

ಸಕಲೇಶಪುರ: ರಾಜಹಂಸ ಬಸ್- ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಕಲೇಶಪುರ ತಾಲ್ಲೂಕಿನ ಗುಂಡ್ಯ ಗಡಿ ದೇವಸ್ಥಾನದ ಸಮೀಪ ಈ ದಾರುಣ ಘಟನೆ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮತ್ತು ಮಂಗಳೂರಿನಿಂದ ಹೊರಟಿದ್ದ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿ ಶ್ರೀಧರ್ ಮರಕಡ ಹಾಗೂ ಉಜಿರೆ ನಿವಾಸಿ ಜನಾರ್ದನ ಕೆರಿಮಾರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸುರೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೃತರು ಸಕಲೇಶಪುರಕ್ಕೆ ಮದುವೆ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆ, ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!