ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಕಲೇಶಪುರ ತಾಲ್ಲೂಕಿನ ಗುಂಡ್ಯ ಗಡಿ ದೇವಸ್ಥಾನದ ಸಮೀಪ ಈ ದಾರುಣ ಘಟನೆ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮತ್ತು ಮಂಗಳೂರಿನಿಂದ ಹೊರಟಿದ್ದ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿ ಶ್ರೀಧರ್ ಮರಕಡ ಹಾಗೂ ಉಜಿರೆ ನಿವಾಸಿ ಜನಾರ್ದನ ಕೆರಿಮಾರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸುರೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೃತರು ಸಕಲೇಶಪುರಕ್ಕೆ ಮದುವೆ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆ, ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…