ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ.
ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 11ರಿಂದ ಮಾರ್ಚ್ 12ರವರೆಗೆ ಎರಡು ದಿನಗಳ ಕಾಲ ಈ ಶೋಧ ಕಾರ್ಯಾಚರಣೆ ನಡೆಯಿತು. ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಅಧಿಕಾರಿಗಳಿಗೆ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದಂತೆ ಒಟ್ಟು ರೂ.6,90,64,716 ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ. ಇದರ ಜೊತೆಗೆ ವಿವಿಧ ರೂಪದಲ್ಲಿ ಭಾರಿ ಪ್ರಮಾಣದ ಚರಾಸ್ತಿಯೂ ಪತ್ತೆಯಾಗಿದೆ. ರೂ.2,66,90,001 ಮೌಲ್ಯದ ಚರಾಸ್ತಿ ಪತ್ತೆಯಾಗಿದೆ.
ಸ್ಥಿರಾಸ್ತಿ ಹಾಗೂ ಚರಾಸ್ತಿಯನ್ನು ಸೇರಿಸಿ ಒಟ್ಟು ರೂ.8,69,54,717 ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ಈ ಆಸ್ತಿಗಳ ಮೂಲದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…