ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವ ಛಾಯಾಗ್ರಾಹಕ ಮೃತ್ಯು..!

ಪಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಯುವ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ನಡೆದಿದೆ. ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ.
ರಾತ್ರಿ ಪಾಣೆಮಂಗಳೂರು ಎಂಬಲ್ಲಿ ಎರಡು ಬೈಕ್‌ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಗ್ಗೆ ಪೋಲೀಸ್ ಇಲಾಖೆ ಮಾಹಿತಿ ನೀಡಿದೆ. ಛಾಯಾಗ್ರಾಹಕ ಸಂಘದ ಬಂಟ್ವಾಳ ವಲಯದ ಸಕ್ರೀಯ ಸದಸ್ಯರಾಗಿದ್ದ ಇವರು ಅತ್ಯುತ್ತಮ ವಿಡಿಯೋಗ್ರಾಫರ್ ಆಗಿದ್ದರು. ಇನ್ನು ರಕ್ಷಿತ್ ಅವರ ಮಗಳ 10 ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮ ನಾಳೆ ಮಾ.15 ರಂದು ಮನೆಯಲ್ಲಿ ನಡೆಸಲು ತಯಾರಿಗಳು ಆಗುತ್ತಿತ್ತು. ಮಗಳ ಹುಟ್ಟು ಹಬ್ಬದ ಸಂಭ್ರಮದ ಮನೆಯೀಗ ತಂದೆಯ ಸಾವಿನಿಂದ ಮೌನವಾಗಿ ರೋಧಿಸುತ್ತಿದೆ. ರಕ್ಷಿತ್ ಸಹೋದರ ರಂಜಿತ್ ಅವರು ಕೂಡ ಸುಮಾರು ವರ್ಷಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಮಲಗಿದ ಸ್ಥಿತಿಯಲ್ಲಿ ಮನೆಯಲ್ಲಿದ್ದಾರೆ. ಅತ್ಯಂತ ಬಡ ಕುಟುಂಬ ಇದೀಗ ಮನೆಯ ಆಧಾರಸ್ತಂಭವಿಲ್ಲದೆ ಕಂಗಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!