ರಾಜ್ಯದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ದಿನಗಣನೆ ಆರಂಭವಾಗುತ್ತಿದ್ದಂತೆ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಕ್ರಮವೊಂದನ್ನು ಘೋಷಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಪ್ರಕಟಿಸಿದ್ದು, ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದು ದೊಡ್ಡ ಸಮಾಧಾನ ತಂದಿದೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:15 ರವರೆಗೆ ಪರೀಕ್ಷೆಗಳು ಜರುಗಲಿವೆ. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಮತ್ತು ಬರಲು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಬಸ್ ನಿರ್ವಾಹಕರಿಗೆ ತಮ್ಮ ಹಾಲ್ ಟಿಕೆಟ್ ತೋರಿಸುವ ಮೂಲಕ ಈ ಸೌಲಭ್ಯವನ್ನು ಪಡೆಯಬಹುದು. ಉಚಿತ ಪ್ರಯಾಣದ ಸೌಲಭ್ಯವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ತಪ್ಪದೇ ತಮ್ಮ ಹಾಲ್ ಟಿಕೆಟ್ ಅನ್ನು ಜೊತೆಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…