ಭೂ ವ್ಯವಹಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದಂತಹ ಭಯಾನಕ ಘಟನೆ ನಿನ್ನೆ (ಮಾ.17)ರಂದು ಮಂಗಳೂರು ನಗರದಲ್ಲಿ ನಡೆದಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಗಾಯಗೊಂಡ ದ್ವಿಚಕ್ರ ವಾಹನ ಸವಾರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲಿಕಟ್ಟೆಯ ನಿವಾಸಿ ಮೋಹನ್ ದಾಸ್ ಶೆಟ್ಟಿ (56) ಘಟನೆಯಲ್ಲಿ ಗಾಯಗೊಂಡವರು ಎಂದು ಗುರುತಿಸಲಾಗಿದೆ. ಫಳ್ನೀರ್ ನಿವಾಸಿ ಮಹಮ್ಮದ್ ಶರೀಫ್ (26) ಬಂಧಿತ ಆರೋಪಿಯಾಗಿದ್ದಾನೆ. ಭೂ ವ್ಯವಹಾರಕ್ಕೆ ಸಂಬಂಧಿಸಿ ಆರೋಪಿ ಮಹಮ್ಮದ್ ಶರೀಫ್ ಸುರತ್ಕಲ್ ಕಾನ ವಾಮಂಜೂರಿನಲ್ಲಿ ಸುಮಾರು 2 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದ. ಇದಕ್ಕೆ ಸಂಬಂಧಿಸಿ ಮಲ್ಲಿಕಟ್ಟೆಯ ಮೋಹನ್ ದಾಸ್ ಶೆಟ್ಟಿ ಅವರು ತನಗೆ ಮೋಸ ಮಾಡಿದ್ದಾರೆಂದು ಸಿಟ್ಟಿನಿಂದ ಮಂಗಳವಾರ ಪೂರ್ವಾಹ್ನ 11 ಗಂಟೆ ವೇಳೆಗೆ ಮಂಗಳೂರು ನಗರದ ಆರ್ಯ ಸಮಾಜ ರಸ್ತೆಯ ಬದಿಯಲ್ಲಿ ಮಾತುಕತೆ ನಡೆಸಿದ ಸಂದರ್ಭ ಆರೋಪಿ ಸಿಟ್ಟಿನಲ್ಲಿ ಮೋಹನ್ ದಾಸ್ ಶೆಟ್ಟಿಯ ಮೊಬೈಲನ್ನು ಕಸಿದುಕೊಂಡಿದ್ದ. ಬಳಿಕ ಮೋಹನ್‌ದಾಸ್ ಶೆಟ್ಟಿ ತನ್ನ ದ್ವಿಚಕ್ರ ವಾಹನವನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಆರೋಪಿ ಮಹಮ್ಮದ್ ಶರೀಫ್ ತನ್ನ ಕಾರನ್ನು ಅತಿ ವೇಗವಾಗಿ ಚಲಾಯಿಸಿಕೊಂಡು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆಸಿ ಕೊಲೆ ಮಾಡಲು ಯತ್ನಿಸಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಕದ್ರಿ ಪೊಲೀಸರು ಆರೋಪಿ ಶರೀಫ್‌ನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…