ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಕಾರ್ಯಾಲಯದಲ್ಲಿ ದಿನಾಂಕ 31-07-23, ಸೋಮವಾರದಂದು ಬೆಳಿಗ್ಗೆ 10.30ಕ್ಕೆ ಟೌನ್ ಹಾಲ್ ನ ಅಂಬೇಡ್ಕರ್ ವೃತ್ತದ ಬಳಿ ಉಡುಪಿ ಕಾಲೇಜೊಂದರ ಶೌಚಾಲಯದಲ್ಲಿ ನಡೆದಿರುವ ವೀಡಿಯೋ ಚಿತ್ರೀಕರಣ ಪ್ರಕರಣದ ಸಂಬಂಧ ನಡೆಯಲಿರುವ ಕಾಂಗ್ರೆಸ್ ಸರಕಾರದ ವಿರುದ್ಧದ ಪ್ರತಿಭಟನೆಗೆ ಪೂರ್ವ ಸಿದ್ದತಾ ಸಭೆಯು ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಪಕ್ಷದ ಕಛೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಹಾಗೂ ದೇವಪ್ಪ ಪೂಜಾರಿಯವರು ಉಡುಪಿ ಕಾಲೇಜಿನಲ್ಲಿ ನಡೆದ ಘಟನೆ ಬಗ್ಗೆ ಮಾಹಿತಿ ಹಾಗೂ ಸೋಮವಾರ ನಡೆಯುವ ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಾವು ಯಾವ ರೀತಿ ಕಾರ್ಯಪ್ರವೃತರಾಗಬೇಕು ಎಂಬ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಡೊಂಬಯ ಅರಳ ದೇವದಾಸ ಶೆಟ್ಟಿ ಗೋವಿಂದ ಪ್ರಭು ಕ್ಷೇತ್ರ ಪದಾಧಿಕಾರಿಗಳು ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಪಂಚಾಯತ್ ಅಧ್ಯಕ್ಷರು ಪುರಸಭೆ ಸದಸ್ಯರು ಮುಂತಾದ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು .
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…