ಹಿಂಸಾತ್ಮಕವಾಗಿ ದನ ಸಾಗಿಸುತ್ತಿದ್ದ ಕಾರೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಡಗ ಎಡಪದವು ಗ್ರಾಮದ ಬಳಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿರುವ ಬಗ್ಗೆ ಬಜರಂಗದಳ ಸಂಘಟನೆ ಮಾಹಿತಿ ನೀಡಿದೆ. ಇದನ್ನು ಅನುಸರಿಸಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕಾರನ್ನು ಪೊಲೀಸರು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ 5 ದನಗಳನ್ನು ಸಾಗಾಟಮಾಡುತ್ತಿರುವುದು ಕಂಡುಬಂದಿದ್ದು, ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಅಲ್ಲದೆ ಫಾರ್ಚುನರ್ ಕಾರಿನಲ್ಲಿ ಮಾರಕಾಯುಧ ಕೂಡ ಪತ್ತೆಯಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…