ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯು ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಅಲ್ಲದೆ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದೂ ತನಿಖೆಯಲ್ಲಿ ಬಹಿರಂಗವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯ ಸೆಕ್ಷನ್ 4, 6, 12 ಹಾಗೂ ಭಾರತೀಯ ನ್ಯಾಯ ಸಂಹಿತೆ ಕಾಯ್ದೆಯ ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತ ಆರೋಪಿಯನ್ನು ಆಶೀಶ್ ಪೂಜಾರಿ ಎಂದು ಗುರುತಿಸಲಾಗಿದ್ದು, ಮಡ್ಯಾರ್ ನಿವಾಸಿಯಾಗಿದ್ದಾನೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…