ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಅಪರೂಪದ ಹಾಗೂ ಸಂತಸದ ಘಟನೆ ನಡೆದಿದೆ.
ಭಾರತೀಯ ತೋಳ `ಗೀತಾ’ ಒಟ್ಟು ಏಳು ಮರಿಗಳಿಗೆ ಜನ್ಮ ನೀಡಿದೆ. ಕಳೆದ ಮೂರು ವರ್ಷಗಳಿಂದ ಉದ್ಯಾನವನದಲ್ಲಿ ಭಾರತೀಯ ತೋಳಗಳನ್ನು ಸಾಕಲಾಗುತ್ತಿದ್ದು, ಇದು ಮೊದಲ ಯಶಸ್ವಿ ಸಂತಾನೋತ್ಪತ್ತಿಯಾಗಿದ್ದು ಮಹತ್ವದ ಮೈಲಿಗಲ್ಲಾಗಿದೆ. ಉದ್ಯಾನವನದ ಅಧಿಕಾರಿಗಳ ಪ್ರಕಾರ, ತಾಯಿ ತೋಳ ಹಾಗೂ ಎಲ್ಲಾ ಏಳು ಮರಿಗಳು ಆರೋಗ್ಯವಾಗಿದ್ದು, ಪಶುವೈದ್ಯರು ಮತ್ತು ಪ್ರಾಣಿ ಪಾಲಕರು ಅವುಗಳನ್ನು ನಿತ್ಯವೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಪ್ರಾಣಿಗಳ ಸಂರಕ್ಷಣೆ ಹಾಗೂ ಸೆರೆಹಿಡಿದ ಪರಿಸರದಲ್ಲಿ ಸಂತಾನೋತ್ಪತ್ತಿ ಕಾರ್ಯಕ್ರಮಕ್ಕೆ ಇದು ದೊಡ್ಡ ಸಾಧನೆ ಎಂದು ಪರಿಗಣಿಸಲಾಗಿದೆ. ಇದಲ್ಲದೆ, ಮರಿಗಳು ಈಗ ಆರೋಗ್ಯವಾಗಿದ್ದು ಚುರುಕಾಗಿ ಓಡಾಡುತ್ತಿವೆ. ಪ್ರವಾಸಿಗರ ಆಕರ್ಷಣೆಯಾಗಿರುವ ಈ ಮುದ್ದು ತೋಳ ಮರಿಗಳನ್ನು ಸಾರ್ವಜನಿಕ ವೀಕ್ಷಣೆಗೆ ತೆರೆಯಲಾಗಿದೆ. ಇದರಿಂದ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುವ ನಿರೀಕ್ಷೆಯಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…