ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆಯಲ್ಲಿ ನಡೆದಿದೆ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಮಾರ್ಚ್ 18 ರಂದು, ಜಾತ್ರೆ ಮುಗಿದ ಬಳಿಕ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೊಂಡು ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರಕಿದೆ. ಕೋಳಿಗಳಿಗೆ ಹರಿತವಾದ ಬಾಳುಗಳನ್ನು ಕಟ್ಟಿ, ಹಿಂಸಾತ್ಮಕವಾಗಿ ಕಾದಾಡಲು ಬಿಡಲಾಗುತ್ತಿದ್ದು, ಹಣವನ್ನು ಪಣವಾಗಿ ಇಟ್ಟು ಜೂಜಾಟ ನಡೆಯುತ್ತಿತ್ತು. ಮೂಡುಬಿದರೆ ಪೊಲೀಸರು ದಾಳಿ ನಡೆಸಿ, ಸ್ಥಳದಲ್ಲಿದ್ದ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ, ಕೋಳಿ ಅಂಕಕ್ಕೆ ಬಳಸಲಾಗುತ್ತಿದ್ದ 17 ಜೀವಂತ ಕೋಳಿಗಳು, ಎರಡು ಬಾಳುಗಳು ಹಾಗೂ 1,480 ರೂ ಹಣವನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ ಜೊತೆಗೆ ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…