ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ.
ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತನ್ನ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ಹೋಗುತ್ತಿರುವಾಗ ಆರೋಪಿ ತನ್ನ ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಗಣೇಶ ನಾಯಕ್ ಇವರು ಮೋಟಾರ್ ಸೈಕಲ್ ಸಮೇತ ರಸ್ತೆಯಲ್ಲಿ ಬಿದ್ದರು. ಈ ಸಂದರ್ಭದಲ್ಲಿ ಟಿಪ್ಪರ್ ಲಾರಿಯ ಹಿಂಬದಿಯ ಟಯರ್ ಹೆಲ್ಮೆಟ್ ಹಾಕಿದ ಗಣೇಶ ನಾಯಕ್ ಅವರ ತಲೆಯ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಗಣೇಶ ನಾಯಕ್ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…