ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಹಿರಿಯ ಯಕ್ಷಗಾನ ವಿದ್ವಾಂಸ ಶ್ರೀ ಸೂರಿಕುಮೇರು ಕೆ. ಗೋವಿಂದ ಭಟ್ ನಿಧನ!

ತೆಂಕುತ್ತಿಟ್ಟು ಯಕ್ಷಗಾನ ಶೈಲಿಯ ಅಪ್ರತಿಮ ಕಲಾತಪಸ್ವಿ, ದಶಕಗಳ ಕಾಲ ರಂಗಸ್ಥಳವನ್ನು ಆಳಿದ ಹಿರಿಯ ವಿದ್ವಾಂಸ ಶ್ರೀ ಸೂರಿಕುಮೇರು ಕೆ. ಗೋವಿಂದ ಭಟ್ ಅವರು ಇಂದು ನಿಧನ ಹೊಂದಿದ್ದಾರೆ.

ಹೌದು..ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ, ತೆಂಕುತಿಟ್ಟಿನ ಅದ್ವಿತೀಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು ಗೆಜ್ಜೆ ಕಳಚಿ ಕಣ್ಮರೆಯಾಗಿದ್ದಾರೆ. ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು ಸಿದ್ದಹಸ್ತರು. ಇವರು 1940, ಮಾರ್ಚ್ 22ರಂದು ಬಂಟ್ವಾಳದ ಕೋಡಪದವಿನ ಕಡು ಬಡತನದ ಕುಟುಂಬದಲ್ಲಿ ಜನಿಸಿದ ಗೋವಿಂದರ ಬಾಲ್ಯ ಕಣ್ಣೀರಿನ ಕತೆಯಾಗಿತ್ತು. ತಂದೆಯ ಅನಾರೋಗ್ಯ, ಆಸ್ತಿಗಾಗಿ ನಡೆದ ಸಂಘರ್ಷ, ಹೋಟೆಲ್‌ನಲ್ಲಿ ಎಂಜಲು ತಟ್ಟೆ ತೊಳೆದ ನೋವು ಹೀಗೆ ಹಸಿವಿನ ಕಿಚ್ಚಿನಲ್ಲೇ ಬೆಂದ ಜೀವವದು. ನಂತರ 1951ರಲ್ಲಿ ಬಾಲಗೋಪಾಲ ವೇಷದ ಮೂಲಕ ಧರ್ಮಸ್ಥಳ ಮೇಳದಲ್ಲಿ ಆರಂಭವಾದ ಅವರ ಕಲಾ ಪಯಣ, ಯಕ್ಷಗಾನದ ಇತಿಹಾಸದಲ್ಲೇ ಒಂದು ದಾಖಲೆಯಾಗಿ ಉಳಿಯುವಂಥದ್ದು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!