ತೆಂಕುತ್ತಿಟ್ಟು ಯಕ್ಷಗಾನ ಶೈಲಿಯ ಅಪ್ರತಿಮ ಕಲಾತಪಸ್ವಿ, ದಶಕಗಳ ಕಾಲ ರಂಗಸ್ಥಳವನ್ನು ಆಳಿದ ಹಿರಿಯ ವಿದ್ವಾಂಸ ಶ್ರೀ ಸೂರಿಕುಮೇರು ಕೆ. ಗೋವಿಂದ ಭಟ್ ಅವರು ಇಂದು ನಿಧನ ಹೊಂದಿದ್ದಾರೆ.
ಹೌದು..ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ, ತೆಂಕುತಿಟ್ಟಿನ ಅದ್ವಿತೀಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು ಗೆಜ್ಜೆ ಕಳಚಿ ಕಣ್ಮರೆಯಾಗಿದ್ದಾರೆ. ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು ಸಿದ್ದಹಸ್ತರು. ಇವರು 1940, ಮಾರ್ಚ್ 22ರಂದು ಬಂಟ್ವಾಳದ ಕೋಡಪದವಿನ ಕಡು ಬಡತನದ ಕುಟುಂಬದಲ್ಲಿ ಜನಿಸಿದ ಗೋವಿಂದರ ಬಾಲ್ಯ ಕಣ್ಣೀರಿನ ಕತೆಯಾಗಿತ್ತು. ತಂದೆಯ ಅನಾರೋಗ್ಯ, ಆಸ್ತಿಗಾಗಿ ನಡೆದ ಸಂಘರ್ಷ, ಹೋಟೆಲ್‌ನಲ್ಲಿ ಎಂಜಲು ತಟ್ಟೆ ತೊಳೆದ ನೋವು ಹೀಗೆ ಹಸಿವಿನ ಕಿಚ್ಚಿನಲ್ಲೇ ಬೆಂದ ಜೀವವದು. ನಂತರ 1951ರಲ್ಲಿ ಬಾಲಗೋಪಾಲ ವೇಷದ ಮೂಲಕ ಧರ್ಮಸ್ಥಳ ಮೇಳದಲ್ಲಿ ಆರಂಭವಾದ ಅವರ ಕಲಾ ಪಯಣ, ಯಕ್ಷಗಾನದ ಇತಿಹಾಸದಲ್ಲೇ ಒಂದು ದಾಖಲೆಯಾಗಿ ಉಳಿಯುವಂಥದ್ದು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…