ಪೊಲೀಸರು ನ್ಯೂಸ್ ಏಜೆನ್ಸಿ ಯುಎನ್‌ಐ ಕಚೇರಿಯ ಸಿಬ್ಬಂದಿಗಳನ್ನು ಹೊರಹಾಕಿ ಬೀಗ ಜಡಿದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ಪೊಲೀಸರ ಕ್ರಮವನ್ನು ಪತ್ರಿಕಾ ಸ್ವಾತಂತ್ರ‍್ಯದ ಮೇಲಿನ ದಾಳಿ ಎಂದು ಸುದ್ದಿ ಸಂಸ್ಥೆ ಖಂಡಿಸಿದರೂ ಹೈಕೋರ್ಟ್ ಆದೇಶವನ್ನು ಪಾಲಿಸಲಾಗಿದೆ ಎಂದು ಅಧಿಕೃತ ಮೂಲಗಳು ಹೇಳಿವೆ. ತಮ್ಮ ಮಹಿಳಾ ಸಿಬ್ಬಂದಿಯನ್ನು ಪೊಲೀಸರು ಅಮಾನುಷವಾಗಿ ನಡೆಸಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಆರೋಪಿಸಿದೆ.

ಎಲ್ಲವನ್ನೂ ವೀಡಿಯೊಗ್ರಫಿ ಮಾಡಿದ್ದು, ಯಾವುದೇ ತಪ್ಪುಗಳು ನಡೆದಿಲ್ಲ ಎಂದು ಪೊಲೀಸ್ ಉಪ ಆಯುಕ್ತ ಸಚಿನ್ ಶರ್ಮಾ ತಿಳಿಸಿದ್ದಾರೆ. ಭೂ ಮಂಜೂರಾತಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುದ್ದಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಜಪ್ತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.



