ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್ ಒಂದರ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೃತ ವ್ಯಕ್ತಿಯನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ನಾರಾಯಣ ಕುಲಾಲ್ ಅವರ ಪುತ್ರ ತಿಲಕರಾಜ್ (28) ಎಂದು ಗುರುತಿಸಲಾಗಿದೆ. ಇವರು ಮಾರ್ಚ್ 19ರಂದು ಅನಂತಾಡಿಯ ಮನೆಯೊಂದರ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸಕ್ಕೆ ಬೇಕಾದ ಮೆಟೀರಿಯಲ್ ಹಾಕಿ ಬಂದಿದ್ದರು. ಮಾರ್ಚ್ 20ರ ಸಂಜೆಯಿಂದ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ತಿಲಕರಾಜ್ ಅವರು ಕಲ್ಲಡ್ಕದಿಂದ ಮಡಿಕೇರಿ ರಸ್ತೆಯ ಮೂಲಕ ತನ್ನ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಮಾರ್ಚ್ 20ರ ಸಂಜೆ ವೇಳೆಗೆ ಸಂಪಾಜೆ ಸಮೀಪದ ಗೂನಡ್ಕದಲ್ಲಿ ರೂಮ್ ಮಾಡಿಕೊಂಡಿದ್ದರು. ಮಾರ್ಚ್ 21ರ ಬೆಳಗ್ಗೆ ರೂಮ್‌ನ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ಬಳಿಕ, ಸಮಾಜ ಸೇವಕ ತಾಜ್ ಟೀಲಿಯವರ ಸಹಕಾರದೊಂದಿಗೆ ಕಿಟಕಿ ಮೂಲಕ ಒಳ ಪ್ರವೇಶಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಯುವ ಉದ್ಯಮಿಯಾಗಿದ್ದ ಇವರಿಗೆ ಯಾವುದೇ ಸಾಲಬಾಧೆ ಅಥವಾ ಆರ್ಥಿಕ ಸಮಸ್ಯೆಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಉತ್ತಮವಾಗಿ ಉದ್ಯಮ ನಡೆಸುತ್ತಿದ್ದ ಇವರು ಇಂತಹ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇನೆಂಬುದು ನಿಗೂಢವಾಗಿದೆ. ಸದ್ಯ ಮೃತದೇಹವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…