ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪ*ಲ್ಟಿ; ಇಬ್ಬರು ಸಾವು, 23 ಮಂದಿಗೆ ಗಾಯ..!

ವೇಗವಾಗಿ ಬಂದ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ನವದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಸಂಭವಿಸಿದೆ.

ರಾಜಸ್ಥಾನದ ಜೈಪುರದಿಂದ ಬರುತ್ತಿದ್ದ ಖಾಸಗಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ಚಾಲಕನ ಅತಿ ವೇಗ ಮತ್ತು ನಿಯಂತ್ರಣ ತಪ್ಪಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಶಂಕಿಸಲಾಗಿದೆ. ಬಸ್ ರಸ್ತೆಯ ಮಧ್ಯದಲ್ಲೇ ಉರುಳಿ ಬಿದ್ದಿದ್ದೆ. ಪ್ರಸಿದ್ದ ಝಂಡೆವಾಲನ್ ದೇವಸ್ಥಾನದಲ್ಲಿ ಪ್ರಸ್ತುತ ನವರಾತ್ರಿ ಉತ್ಸವದ ಆಚರಣೆಗಳು ನಡೆಯುತ್ತಿದ್ದು, ದೇವಸ್ಥಾನಕ್ಕೆ ಭಕ್ತರ ಆಗಮನದ ವೇಳೆಯೇ ಈ ಘಟನೆ ನಡೆದಿದೆ. ಈ ಅಪಘಾತ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಸ್ ಪಲ್ಟಿಯಾದ ಶಬ್ದ ಕೇಳಿ ಸ್ಥಳೀಯರು ಮತ್ತು ದೇವಸ್ಥಾನದ ಬಳಿ ಇದ್ದ ಭಕ್ತರು ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಬಸ್ಸಿನ ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಗಾಯಗೊಂಡ 23 ಪ್ರಯಾಣಿಕರನ್ನು ತಕ್ಷಣವೇ ಸಮೀಪದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!