ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ ಅವರು ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ನಡೂರು ಗ್ರಾಮದ ನಿವಾಸಿಯಾಗಿರುವ ಪ್ರಕಾಶ್ ಕುಲಾಲ್ ಅತ್ಯಂತ ಚುರುಕಿನ, ಪ್ರತಿಭಾಶಾಲಿ ಯುವ ಭಜನಾ ತರಬೇತುದಾರರಾಗಿದ್ದರು. ಭಜನಾ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮಲಗಿದ್ದರು. ಅವರಿಗೆ ಆತ್ಮೀಯರೊಬ್ಬರು ಕರೆ ಮಾಡಿದಾಗ ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡು ಮನೆಯ ಮಾಡಿನ ಹಂಚು ತೆಗೆದು ಒಳಗೆ ಹೋಗಿ ನೋಡಿದಾಗ ಪ್ರಕಾಶ್ ಅವರು ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಪ್ರಕಾಶ್ ಕುಲಾಲ್ ಅತಿದೊಡ್ಡ ಭಜನಾ ಕಾರ್ಯಕ್ರಮಗಳಲ್ಲಿ ಒಂದಾದ ಸಂಕೀರ್ತನ ಮಂದಾರ್ತಿ ಸೇರಿ ಹತ್ತು ಹಲವು ಕಡೆಗಳಲ್ಲಿ ತಮ್ಮನ್ನು ಭಜನೆಗಾಗಿ ಸಮರ್ಪಿಸಿಕೊಂಡ ಯುವಕ. ಯಾವುದೇ ಹಣ ಅಥವಾ ಇತರ ಫಲಾಪೇಕ್ಷೆಗಳಿಲ್ಲದೆ ಭಜನಾ ತರಬೇತಿ ನೀಡುತ್ತಿದ್ದ, ತನ್ನ ಹೆಚ್ಚಿನ ಸಮಯವನ್ನು ಭಜನೆಗಾಗಿ ಮೀಸಲಿಡುತ್ತಿದ್ದರು. ಮೃತರು ಪತ್ನಿ, ಮಗು ಮತ್ತು ಪೋಷಕರನ್ನು ಅಗಲಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…