ಏಣಿಯಿಂದ ಆಯತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಹೆಬ್ರಿ ಹುತುರ್ಕೆ ಎಂಬಲ್ಲಿ ನಡೆದಿದೆ.
ಹೆಬ್ರಿ ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ಮೃತ ದುರ್ದೈವಿ. ಈತ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ರಜೆಯಲ್ಲಿ ತನ್ನ ವಿದ್ಯಾಭ್ಯಾಸಕ್ಕೂ, ಮನೆಯ ಖರ್ಚಿಗೂ ಸಹಾಯವಾಗಲಿ ಎಂಬ ಉದ್ದೇಶದಿಂದ ಕೆಲಸಕ್ಕೆ ಹೋಗಿದ್ದ. ಆದರೆ ಹೆಬ್ರಿ ಹುತುರ್ಕೆ ಎಂಬಲ್ಲಿ ಕೆಲಸ ಮಾಡುವಾಗ ಏಣಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಈತ ಕೇವಲ ವಿದ್ಯಾರ್ಥಿ ಮಾತ್ರವಲ್ಲ, ಮನೆಯ ಆಧಾರವಾಗಿದ್ದನು. ಸಾತ್ವಿಕ್‌ಗೆ ಕೃಷಿಯ ಬಗ್ಗೆ ಅರಿವು ಇತ್ತು. ಮೊನ್ನೆಯಷ್ಟೆ ಪಿಯುಸಿ ಪರೀಕ್ಷೆ ಮುಗಿಸಿದ್ದ. ಮುಂದಿನ ಹಂತ ಡಿಗ್ರಿ ವಿದ್ಯಾಭ್ಯಾಸ. ಅದಕ್ಕಾಗಿ ಹಣ ಬೇಕು, ಮನೆಯವರಿಗೂ ಕೈಲಾದ ಸಹಾಯ ಮಾಡಬೇಕು ಎಂಬ ದೃಷ್ಟಿಯಿಂದ ರಜೆಯಲ್ಲಿ ಕೆಲಸಕ್ಕೆ ಹೋಗಿದ್ದ. ಕೆಲಸಕ್ಕೆ ಹೋದವನು ಮನೆಗೆ ಮರಳಿ ಬಾರದೆ ಒಂದು ದುರ್ಘಟನೆಯಲ್ಲಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…