ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಏಪ್ರಿಲ್ 10ರಂದು ಕುಕ್ಕರ್ ಸ್ಫೋಟದ ಆರೋಪಿಗೆ ಶಿಕ್ಷೆ ಪ್ರಮಾಣ ಪ್ರಕಟ..!

ಕುಕ್ಕರ್‌ನಲ್ಲಿ ಐಇಡಿ ಇಟ್ಟು ಬಾಂಬ್ ಇಟ್ಟು ಸ್ಫೋಟಿಸಿದ್ದೇನೆ, ನಾನು ತಪ್ಪು ಮಾಡಿದ್ದೇನೆ ಎಂದು ಕುಕ್ಕರ್ ಸ್ಫೋಟದ ಆರೋಪಿ ಶಾರೀಕ್ ತಪ್ಪೊಪ್ಪಿಗೆ ಮಾಡಿದ್ದು, ಎಪ್ರಿಲ್ 10ರಂದು ಶಿಕ್ಷೆ ಪ್ರಕಟವಾಗಲಿದೆ.

ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. ಪ್ರಕರಣ ಸಂಬಂಧ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಶಾರೀಕ್, 2025ರ ಡಿಸೆಂಬರ್‌ನಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 229ರ ಅಡಿಯಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿದ್ದು ಇದೇ ಮಾರ್ಚ್ 26ರಂದು ನ್ಯಾಯಾಲಯ ಈ ಅರ್ಜಿಯನ್ನು ಅಂಗೀಕರಿಸಿದೆ.

2022ರ ನವೆಂಬರ್ 19ರಂದು ಶಿವಮೊಗ್ಗ ಮೂಲದ 27 ವರ್ಷದ ಶಾರೀಕ್, ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದನು. ಚಿಕಿತ್ಸೆ ಬಳಿಕ ಶಾರೀಕ್ ನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಕುಕ್ಕರ್‌ನಲ್ಲಿ ಐಇಡಿ ಇಟ್ಟು ಸ್ಪೋಟ ಮಾಡಿದ್ದೇನೆ. ನನಗೆ ಪಶ್ಚಾತ್ತಾಪವಾಗಿದೆ.

ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾನೆ. ಮೂರು ತಿಂಗಳ ವಿಚಾರಣೆ ಬಳಿಕ ನ್ಯಾಯಾಲಯವು ಈ ಅರ್ಜಿಯನ್ನು ಮಾನ್ಯ ಮಾಡಿದೆ. ಏಪ್ರಿಲ್ 10ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಕುಕ್ಕರ್ ಬಾಂಬ್ ಸ್ಪೋಟ ಕುರಿತಂತೆ ಎನ್‌ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!