ನಾಟೇಕಲ್ ಸಮೀಪದ ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಭೀಕರ ಕಾರು ಅಪಘಾತ ಸಂಭವಿಸಿದೆ.

ಕೋಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಸುಮಾರು 10 ಅಡಿ ಆಳಕ್ಕೆ ಜಿಗಿದು, ಸಭಾಂಗಣ ಕಟ್ಟಡದ ಗೋಡೆಗೆ ಬಡಿದು ಕೆಳಕ್ಕೆ ಉರುಳಿದೆ.

ಅಪಘಾತದ ತೀವ್ರತೆ ಭೀಕರವಾಗಿದ್ದರೂ, ವಾಹನದಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆಯ ಕುರಿತು ಮಂಗಳೂರು ದಕ್ಷಿಣ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



