ಜನ ಮನದ ನಾಡಿ ಮಿಡಿತ

Advertisement

ಪತ್ರಿಕೋದ್ಯಮದ ಹಿರಿಯ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ: ವಿವೇಕ್ ಆಳ್ವ ಮಾಧ್ಯಮದಲ್ಲಿ ಧನಾತ್ಮಕ ಚಿಂತನೆ ಅವಶ್ಯ

ವಿದ್ಯಾಗಿರಿ: ‘ಮಾಧ್ಯಮ ಕ್ಷೇತ್ರದಲ್ಲಿ ಧನಾತ್ಮಕ ಚಿಂತನೆಯು ಇಂದಿನ ಅವಶ್ಯವಾಗಿದೆ. ನೀವು ಸಮಾಜಕ್ಕೆ ಕೊಡುಗೆ ನೀಡುವಂತವರಾಗಬೇಕು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಗುರುವಾರ ಪಿ.ಜಿ ಸೆಮಿನಾರ್‌ಹಾಲ್ ನಲ್ಲಿ ಹಮ್ಮಿಕೊಳ್ಳಲಾದ ‘ಫೀರ್ ಮಿಲೇಂಗೆ’ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವೃತ್ತಿ ಜೀವನದಲ್ಲಿ ನೈತಿಕತೆ ಮುಖ್ಯ. ಯಾವುದೇ ಸಂಬಆಧ ಅಥವಾ ಕೆಲಸ ನಿರ್ವಹಿಸುವಾಗ ನಿರೀಕ್ಷೆ ರಹಿತ ಮನೋಭಾವ ಹೊಂದಿರಬೇಕು. ಆಗ ಯಶಸ್ಸು ಸಾಧ್ಯ ಎಂದರು. ಎಲ್ಲರನ್ನೂ ಪ್ರೀತಿಸಿ ಗೌರವಿಸುವ ಡಾ. ಎಂ. ಮೋಹನ ಆಳ್ವರ ಗುಣವು ಅವರ ಯಶಸ್ವಿಗೆ ಮೂಲ. ಪ್ರತಿಯೊಬ್ಬರು ಅನನ್ಯ ವ್ಯಕ್ತಿತ್ವದೊಂದಿಗೆ ಸಮಾಜದಲ್ಲಿ ಒಗ್ಗಟ್ಟಿನಿಂದ ಬದುಕುವ ಮನಸ್ಥಿತಿ ಹೊಂದಿರಬೇಕು. ಪತ್ರಿಕೋದ್ಯಮ ವಿಭಾಗದಲ್ಲಿರುವ ‘ಜೀವಕಳೆ’ ನನಗೆ ಇಷ್ಟ ಎಂದು ಸಂತಸ ವ್ಯಕ್ತಪಡಿಸಿದರು.

ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ‘ಪತ್ರಿಕೋದ್ಯಮ ವಿದ್ಯಾರ್ಥಿಗಳು ಪ್ರೀತಿ, ವಿಶ್ವಾಸದಿಂದ ಕರ್ತವ್ಯ ನಿರ್ವಹಿಸುತ್ತಿರುವುದು ಖುಷಿ ನೀಡಿದೆ. ಇಲ್ಲಿ ಕಲಿತ ಪಾಠ ಬದುಕಿನಲ್ಲಿ ಅಳವಡಿಸಿಕೊಂಡಾಗ ಶೇಕಡಾ 100 ಸಾಧನೆ ಮಾಡುತ್ತೀರಿ’ ಎಂದರು. ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಇದ್ದರು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು.

ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ, ಸಹ ಪ್ರಾಧ್ಯಾಪಕ ಡಾ. ಶ್ರೀನಿವಾಸ್ ಹೊಡೆಯಾಲ, ಸಹಾಯಕ ಪ್ರಾಧ್ಯಾಪಕ ಹರ್ಷವರ್ಧನ ಪಿ.ಆರ್, ನಿಶಾನ್ ಕೋಟ್ಯಾನ್, ಇಂಚರಾ ಗೌಡ, ದೀಕ್ಷಿತಾ, ದುರ್ಗಾ ಪ್ರಸನ್ನ, ರಕ್ಷಿತಾ ತೋಡಾರು, ಆಡ್ಮಿಷನ್ ಅಧಿಕಾರಿ ಹನಮಂತಪ್ಪ ಸಿಮಿಕೇರಿ ಇದ್ದರು. ವಿದ್ಯಾರ್ಥಿಗಳಾದ ಅವಿನಾಶ್ ಕಟೀಲ್ ಮತ್ತು ಪ್ರಖ್ಯಾತ್ ಮಿಜಾರ್ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!