ವಿದ್ಯಾಗಿರಿ: ‘ಮಾಧ್ಯಮ ಕ್ಷೇತ್ರದಲ್ಲಿ ಧನಾತ್ಮಕ ಚಿಂತನೆಯು ಇಂದಿನ ಅವಶ್ಯವಾಗಿದೆ. ನೀವು ಸಮಾಜಕ್ಕೆ ಕೊಡುಗೆ ನೀಡುವಂತವರಾಗಬೇಕು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಗುರುವಾರ ಪಿ.ಜಿ ಸೆಮಿನಾರ್‌ಹಾಲ್ ನಲ್ಲಿ ಹಮ್ಮಿಕೊಳ್ಳಲಾದ ‘ಫೀರ್ ಮಿಲೇಂಗೆ’ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ವೃತ್ತಿ ಜೀವನದಲ್ಲಿ ನೈತಿಕತೆ ಮುಖ್ಯ. ಯಾವುದೇ ಸಂಬಆಧ ಅಥವಾ ಕೆಲಸ ನಿರ್ವಹಿಸುವಾಗ ನಿರೀಕ್ಷೆ ರಹಿತ ಮನೋಭಾವ ಹೊಂದಿರಬೇಕು. ಆಗ ಯಶಸ್ಸು ಸಾಧ್ಯ ಎಂದರು. ಎಲ್ಲರನ್ನೂ ಪ್ರೀತಿಸಿ ಗೌರವಿಸುವ ಡಾ. ಎಂ. ಮೋಹನ ಆಳ್ವರ ಗುಣವು ಅವರ ಯಶಸ್ವಿಗೆ ಮೂಲ. ಪ್ರತಿಯೊಬ್ಬರು ಅನನ್ಯ ವ್ಯಕ್ತಿತ್ವದೊಂದಿಗೆ ಸಮಾಜದಲ್ಲಿ ಒಗ್ಗಟ್ಟಿನಿಂದ ಬದುಕುವ ಮನಸ್ಥಿತಿ ಹೊಂದಿರಬೇಕು. ಪತ್ರಿಕೋದ್ಯಮ ವಿಭಾಗದಲ್ಲಿರುವ ‘ಜೀವಕಳೆ’ ನನಗೆ ಇಷ್ಟ ಎಂದು ಸಂತಸ ವ್ಯಕ್ತಪಡಿಸಿದರು.
ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ‘ಪತ್ರಿಕೋದ್ಯಮ ವಿದ್ಯಾರ್ಥಿಗಳು ಪ್ರೀತಿ, ವಿಶ್ವಾಸದಿಂದ ಕರ್ತವ್ಯ ನಿರ್ವಹಿಸುತ್ತಿರುವುದು ಖುಷಿ ನೀಡಿದೆ. ಇಲ್ಲಿ ಕಲಿತ ಪಾಠ ಬದುಕಿನಲ್ಲಿ ಅಳವಡಿಸಿಕೊಂಡಾಗ ಶೇಕಡಾ 100 ಸಾಧನೆ ಮಾಡುತ್ತೀರಿ’ ಎಂದರು. ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಇದ್ದರು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು.
ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ, ಸಹ ಪ್ರಾಧ್ಯಾಪಕ ಡಾ. ಶ್ರೀನಿವಾಸ್ ಹೊಡೆಯಾಲ, ಸಹಾಯಕ ಪ್ರಾಧ್ಯಾಪಕ ಹರ್ಷವರ್ಧನ ಪಿ.ಆರ್, ನಿಶಾನ್ ಕೋಟ್ಯಾನ್, ಇಂಚರಾ ಗೌಡ, ದೀಕ್ಷಿತಾ, ದುರ್ಗಾ ಪ್ರಸನ್ನ, ರಕ್ಷಿತಾ ತೋಡಾರು, ಆಡ್ಮಿಷನ್ ಅಧಿಕಾರಿ ಹನಮಂತಪ್ಪ ಸಿಮಿಕೇರಿ ಇದ್ದರು. ವಿದ್ಯಾರ್ಥಿಗಳಾದ ಅವಿನಾಶ್ ಕಟೀಲ್ ಮತ್ತು ಪ್ರಖ್ಯಾತ್ ಮಿಜಾರ್ ನಿರೂಪಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…