ನಿಲ್ಲಿಸಿದ್ದ ಸ್ಕೂಟರ್‌ಗೆ ಹಿಂಬದಿಯಿಂದ ಕೆ.ಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರು ಗಾಯಗೊಂಡ ಘಟನೆ ಬಂಟ್ವಾಳ – ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಜಾಲಕಟ್ಟೆ ಬಸವನಗುಡಿ ಎಂಬಲ್ಲಿ ಸಂಭವಿಸಿದೆ.
ಸ್ಕೂಟರ್ ಸವಾರರಾದ ಬಡಗಕಜೆಕಾರು ಅಂಚೆ ಕಛೇರಿ ತಾತ್ಕಾಲಿಕ ಪೋಸ್ಟ್ ಮಾಸ್ಟರ್, ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ನಿವಾಸಿ ಶ್ರೇಯಸ್ ಹಾಗೂ ಸಹೋದ್ಯೋಗಿ ಶಾಲಿನಿ ಅವರು ಗಾಯಗೊಂಡಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಶ್ರೇಯಸ್ ಅವರು ಅಂಚೆ ಇಲಾಖೆಯ ಕೆಲಸದ ನಿಮಿತ್ತ ಕೇಂದ್ರ ಅಂಚೆ ಕಛೇರಿಯಾದ ಬಸವನಗುಡಿಯಲ್ಲಿರುವ ಪುಂಜಾಲಕಟ್ಟೆ ಅಂಚೆ ಕಛೇರಿಗೆಂದು ಶಾಲಿನಿ ಯು. ಅವರನ್ನು ಸಹಸವಾರರಾಗಿ ಕುಳ್ಳಿರಿಸಿಕೊಂಡು ಬಸವನಗುಡಿ ಎಂಬಲ್ಲಿರುವ ಅಂಚೆ ಕಛೇರಿಯ ಮುಂಭಾಗ ತಲುಪಿ ಕೇಂದ್ರ ಅಂಚೆ ಕಛೇರಿಗೆ ಹೋಗಲು ಆಕ್ಟಿವಾ ಸ್ಕೂಟರ್‌ನ್ನು ಇಂಡಿಕೇಟರ್ ಹಾಕಿ ನಿಲ್ಲಿಸಿದಾಗ ಅವರ ಹಿಂದಿನಿಂದ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್‌ನ ಚಾಲಕನಾದ ಮಂಜುನಾಥ ಉಪ್ಪಾರ ಎಂಬಾತನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿಕೊಂಡು ಬಂದು ಶ್ರೇಯಸ್ ಅವರ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಶ್ರೇಯಸ್ ಹಾಗೂ ಸಹಸವಾರೆ ಶಾಲಿನಿ ಯು. ಅವರು ಸ್ಕೂಟರ್ ಸಮೇತ ಡಾಮಾರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…