ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಕಾರು ಹಾಗೂ ಟ್ರಕ್ ನಡುವೆ ಅಪಘಾತ ನಡೆದಿದ್ದು ಅಪಘಾತದಲ್ಲಿ ಬೆಂಗಳೂರಿನ ಮಮತಾ ಹಾಗೂ ಧೃತಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾನ್ನವಿ ಹಾಗೂ ರಾಘು ಸಹಿತ ಮತ್ತಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾವನ್ನಪ್ಪಿದವರು ಮತ್ತು ಗಾಯಾಳುಗಳ ಕುಟುಂಬ ಸದಸ್ಯರು ಬೆಂಗಳೂರಿನವರಾಗಿದ್ದು, ರಜೆ ನಿಮಿತ್ತ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ಅಲ್ಲಿಂದ ಮುರುಡೇಶ್ವರ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಎಂ ಎಚ್ ಐ ತುರ್ತು ಸ್ಪಂದನ ತಂಡದ ಎರಡು ಅಂಬುಲೆನ್ಸ್ ಗಳಲ್ಲಿ ಗಾಯಾಳುಗಳನ್ನು ಹಾಗೂ ಶವಗಳನ್ನು ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆ ಕೊಂಡೊಯ್ಯಲಾಯಿತು. ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ, ಬೈಂದೂರು ವೃತ್ತ ನಿರೀಕ್ಷಕರು, ಠಾಣಾಧಿಕಾರಿಗಳು, ಒನ್ ವನ್ ಟು ಸಿಬ್ಬಂದಿ, ಹೈವೇ ಪೆಟ್ರೋಲ್ ಸಿಬ್ಬಂದಿ ಮತ್ತು ಐ ಆರ್ ಬಿ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರಲ್ಲಿ ಕೆಲವರು ಗಾಯಾಳುಗಳನ್ನು ಹಾಗೂ ಶವಸಾಗಾಟ ಮಾಡಲು ಸಹಕರಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…