ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಪೌಜಾನ್ ಅಹ್ಮದ್ ಬಂಧಿತ ಆರೋಪಿ. ಈತ ಶಿರೂರು ಗ್ರಾಮದ ಕೋಣಮಕ್ಕಿ ಎಂಬಲ್ಲಿ ಪಾತಿಮಾ ಎಂಬವರ ಮನೆಯಲ್ಲಿ ಕಳ್ಳತನ ಯತ್ನ ನಡೆಸಿದ್ದ. ಪಾತಿಮಾ ಅವರು ಮಲಗಿದ್ದ ವೇಳೆ, ಮನೆಯ ಹಿಂಬಾಗಿಲನ್ನು ಒಡೆದು ಮನೆ ಒಳನುಗ್ಗಿ, ಮನೆಯಲ್ಲಿದ್ದ ಗೋದ್ರೇಜ್ ಅಲಮಾರಿಯನ್ನು ತೆರೆದು ಹುಡುಕಾಡುತ್ತಿದ್ದನು. ಈ ವೇಳೆ ಪಾತಿಮಾ ಅವರು ಎಚ್ಚರಗೊಂಡು ಬೊಬ್ಬೆ ಹಾಕಿದಾಗ, ಆರೋಪಿ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಈ ಕುರಿತು ಪಾತಿಮಾ ಅವರು ನೀಡಿದ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ವೇಳೆ, ಆರೋಪಿಯು ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ತನ್ನ ಸ್ಕೂಟರ್‌ನಲ್ಲಿ ಭಯಾನಕ ರೀತಿಯಲ್ಲಿ ವೀಲಿಂಗ್ ಪ್ರಕರಣದಲ್ಲೂ ಭಾಗಿಯಾಗಿದ್ದ. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!