ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.
ಪೌಜಾನ್ ಅಹ್ಮದ್ ಬಂಧಿತ ಆರೋಪಿ. ಈತ ಶಿರೂರು ಗ್ರಾಮದ ಕೋಣಮಕ್ಕಿ ಎಂಬಲ್ಲಿ ಪಾತಿಮಾ ಎಂಬವರ ಮನೆಯಲ್ಲಿ ಕಳ್ಳತನ ಯತ್ನ ನಡೆಸಿದ್ದ. ಪಾತಿಮಾ ಅವರು ಮಲಗಿದ್ದ ವೇಳೆ, ಮನೆಯ ಹಿಂಬಾಗಿಲನ್ನು ಒಡೆದು ಮನೆ ಒಳನುಗ್ಗಿ, ಮನೆಯಲ್ಲಿದ್ದ ಗೋದ್ರೇಜ್ ಅಲಮಾರಿಯನ್ನು ತೆರೆದು ಹುಡುಕಾಡುತ್ತಿದ್ದನು. ಈ ವೇಳೆ ಪಾತಿಮಾ ಅವರು ಎಚ್ಚರಗೊಂಡು ಬೊಬ್ಬೆ ಹಾಕಿದಾಗ, ಆರೋಪಿ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಈ ಕುರಿತು ಪಾತಿಮಾ ಅವರು ನೀಡಿದ ದೂರಿನ ಮೇರೆಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ವೇಳೆ, ಆರೋಪಿಯು ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ತನ್ನ ಸ್ಕೂಟರ್‌ನಲ್ಲಿ ಭಯಾನಕ ರೀತಿಯಲ್ಲಿ ವೀಲಿಂಗ್ ಪ್ರಕರಣದಲ್ಲೂ ಭಾಗಿಯಾಗಿದ್ದ. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…