ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಂ.ಅರುಣ್ ಐತಾಳ್ ಅವರು ಮಾತನಾಡಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಕಲಾವಿದರಿಗೆ ಗಣನೀಯ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದರು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಫೌಂಡೇಶನ್ ಆಶ್ರಯದಲ್ಲಿ ವಿವಿಧ ದಾನಿಗಳ ನೆರವಿನಿಂದ ಯಕ್ಷಗಾನ ಕಲಾವಿದರಿಗಾಗಿ ವೈವಿಧ್ಯಮಯ ಸೇವಾಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಕದ್ರಿಯ ಮೊಕ್ತೇಸರ ದಿಲ್ ರಾಜ್ ಆಳ್ವ ಅವರಿಗೆ ಯಕ್ಷಧ್ರುವ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಪಾವಂಜೆ ಮೇಳದ ಯುವ ಭಾಗವತ ಭರತ್ ರಾಜ್ ಶೆಟ್ಟಿ ಹಾಗೂ ಹಾಸ್ಯಗಾರ ಸಂದೇಶ್ ಮಂದಾರ ಅವರಿಗೆ ಯಕ್ಷ ಗೌರವ ನೀಡಿ ಸನ್ಮಾನಿಸಲಾಯಿತು.

ಅತಿಥಿಗಳಾಗಿ ಉದ್ಯಮಿಗಳಾದ ರಮೇಶ್ ಶೆಟ್ಟಿ ಕಲ್ಕಾರ್, ಸಂತೋಷ್ ಪೂಂಜ, ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸಂತೋಷ್ ಶೆಟ್ಟಿ ಬೋಳಾರ್, ಜಯಶೀಲ ಅಡ್ಯಂತಾಯ, ಟ್ರಸ್ಟಿಗಳಾದ ಆರತಿ ಆಳ್ವ, ಅನಿತಾ ಪಿಂಟೋ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು ಘಟಕದ ಕೋಶಾಧಿಕಾರಿ ಗೋಪಿನಾಥ್ ಶೆಟ್ಟಿ ಮತ್ತು ಸುಬ್ರಹ್ಮಣ್ಯ ಭಟ್ ಇವರು ಸಂಮಾನ‌ ಪತ್ರ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಎ. ಕೃಷ್ಣ ಶೆಟ್ಟಿ ತಾರೆಮಾರ್ ಸ್ವಾಗತಿಸಿದರು. ಸತೀಶ್ ಶೆಟ್ಟಿ ಕೊಡಿಯಾಲಬೈಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶ್ರೀ ಪಾವಂಜೆ ಮೇಳದವರಿಂದ “ಶ್ರೀ ತುಳಸಿ” ಯಕ್ಷಗಾನ ಬಯಲಾಟ ನಡೆಯಿತು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

ಬೆಂಗಳೂರು: ಏಪ್ರಿಲ್ 10ರಂದು ಕುಕ್ಕರ್ ಸ್ಫೋಟದ ಆರೋಪಿಗೆ ಶಿಕ್ಷೆ ಪ್ರಮಾಣ ಪ್ರಕಟ..!

error: Content is protected !!