ಕರಾವಳಿ

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ ಸ್ವಯಂ-ಗಣತಿ (Self-Enumeration) ಪ್ರಕ್ರಿಯೆ ಆರಂಭವಾಗಿದೆ.

 

Census of India ಅಡಿಯಲ್ಲಿ ನಡೆಯುತ್ತಿರುವ ಈ ಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಹಾಗೂ ಹೌಸಿಂಗ್ ಸೆನ್ಸಸ್‌ಗಾಗಿ ಸ್ವಯಂ-ಗಣತಿ ಪ್ರಕ್ರಿಯೆಯನ್ನು ಏಪ್ರಿಲ್ 1ರಿಂದ 15ರವರೆಗೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

ಏಪ್ರಿಲ್ 1ರಿಂದ ಮೊದಲ ಹಂತ ಪ್ರಾರಂಭವಾಗಿದ್ದು, ಜನರು ಡಿಜಿಟಲ್ ಪೋರ್ಟಲ್ ಮೂಲಕ ಸ್ವತಃ ತಮ್ಮ ಮಾಹಿತಿಯನ್ನು ಭರ್ತಿ ಮಾಡಬಹುದಾಗಿದೆ.

 

ಈ ಕುರಿತು ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರಾದ ಮೃತ್ಯುಂಜಯ್ ಕುಮಾರ್ ನಾರಾಯಣ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ಜನಗಣತಿಯಲ್ಲಿ ಭಾಗವಹಿಸಲು ಯಾವುದೇ ದಾಖಲೆಗಳನ್ನು ಒದಗಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

ಈ ಬಾರಿ ಸರ್ಕಾರ ಜನರಿಗೆ ‘ಸೆಲ್ಫ್ ಎನ್ಯುಮರೇಷನ್’ ಎಂಬ ಹೊಸ ವ್ಯವಸ್ಥೆಯನ್ನು ಪರಿಚಯಿಸಿದೆ. ಇದರಿಂದ ಗಣತಿದಾರರು ಮನೆ-ಮನೆಗೆ ಭೇಟಿ ನೀಡುವ ಮುನ್ನವೇ 15 ದಿನಗಳ ಅವಧಿಯಲ್ಲಿ ನಾಗರಿಕರು ತಮ್ಮ ಮಾಹಿತಿಯನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಿಕೊಳ್ಳಬಹುದಾಗಿದೆ.

 

ಸ್ವಯಂ-ಗಣತಿಯನ್ನು ನಾಲ್ಕು ಪ್ರಮುಖ ಹಂತಗಳಲ್ಲಿ ನಡೆಸಲಾಗುತ್ತದೆ.

ಮೊದಲ ಹಂತ – ನೋಂದಣಿ
ನಾಗರಿಕರು https://se.census.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಮೊಬೈಲ್ ಸಂಖ್ಯೆಯ ಮೂಲಕ OTP ಪಡೆದು ಲಾಗಿನ್ ಆಗಬೇಕು. ಬಳಿಕ ಪ್ರಾಥಮಿಕ ವಿವರಗಳನ್ನು ದಾಖಲಿಸಿ ನೋಂದಣಿ ಪೂರ್ಣಗೊಳಿಸಬೇಕು.

ನೋಂದಣಿಯ ಬಳಿಕ ವಿಳಾಸ ಮತ್ತು ಸ್ಥಳದ ಮಾಹಿತಿ ಪರಿಶೀಲನೆ ಮಾಡಬೇಕು. ಮನೆ ಮತ್ತು ಸ್ಥಳದ ವಿವರಗಳನ್ನು ಸರಿಯಾಗಿ ಗುರುತಿಸಿ ದೃಢೀಕರಿಸಬೇಕು.

ಮೂರನೇ ಹಂತ – ಮಾಹಿತಿ ನಮೂದಿಸುವುದಾಗಿರುತ್ತದೆ.
ಕುಟುಂಬದ ಸದಸ್ಯರ ವಿವರಗಳನ್ನು ದಾಖಲಿಸಿ, ನೀಡಿದ ಮಾಹಿತಿಯನ್ನು ಪರಿಶೀಲಿಸಿದ ಬಳಿಕ ಅಂತಿಮವಾಗಿ ‘Final Submit’ ಮಾಡಬೇಕು. ಈ ಹಂತದಲ್ಲಿ ಸೆನ್ಸಸ್ ಐಡಿ (SE ID) ಸೃಷ್ಟಿಯಾಗುತ್ತದೆ.

ನಂತರ ಗಣತಿದಾರರು ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಪರಿಶೀಲಿಸುತ್ತಾರೆ. ಅಗತ್ಯವಿದ್ದಲ್ಲಿ ತಿದ್ದುಪಡಿ ಕೂಡ ಮಾಡಲಾಗುತ್ತದೆ.

ಡಿಜಿಟಲ್ ವ್ಯವಸ್ಥೆಯ ಮೂಲಕ ಸುಲಭ, ವೇಗದ ಹಾಗೂ ಪಾರದರ್ಶಕ ಗಣತಿ ನಡೆಸುವ ಉದ್ದೇಶದಿಂದ ಈ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಇದರ ಪ್ರಯೋಜನ ಪಡೆಯುವಂತೆ ಸರ್ಕಾರ ಈಗಾಗಲೇ ಮನವಿ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ‌ ಹಾಗು ಆಯಾ ತಾಲೂಕುಗಳ ತಹಶೀಲ್ದಾರರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಜನತೆಯಲ್ಲಿ‌ ಮನವಿ‌ ಮಾಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

2 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

2 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

4 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

5 days ago

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಅಪಘಾತ ಸಂಭವಿಸಿ ಇಬ್ಬರು…

5 days ago