ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ ಅಧಿಕಾರಿ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಶೆಟ್ಟಿ ಅವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ.ಅಜಿತ್ ಕುಮಾರ್ ರೈ ಮಾಲಾಡಿ ಅವರು ಮಾತನಾಡಿ, ರವೀಂದ್ರನಾಥ ಶೆಟ್ಟಿ ಅವರ ಅಗಲುವಿಕೆ ಸಮಾಜಕ್ಕೆ ಆದ ಬಲು ದೊಡ್ಡ ನಷ್ಟವಾಗಿದೆ. ಯೂನಿಯನ್ ಬ್ಯಾಂಕಿನ ಅಧ್ಯಕ್ಷರಿಂದ ಹಿಡಿದು ಸಾಮಾನ್ಯ ಸಿಬ್ಬಂದಿಗಳೊಂದಿಗೆ ಅನ್ಯೋನ್ಯ ಒಡನಾಟ ಹೊಂದಿದ್ದ ಅವರು ಬಂಟರ ಮಾತೃ ಸಂಘದಲ್ಲಿ ಪದಾಧಿಕಾರಿಯಾಗಿ ಸಲ್ಲಿಸಿರುವ ಸೇವೆ ಎಂದೂ ಮರೆಯಲಾಗದು ಎಂದರು.
ಮಾತೃ ಸಂಘದ ತಾಲೂಕು ಸಮಿತಿಯ ಮಾಜಿ ಸಂಚಾಲಕ ಜಯರಾಮ ಸಾಂತ ಮಾತನಾಡಿ, ರವೀಂದ್ರನಾಥ ಶೆಟ್ಟಿ ಅವರ ಪರೋಪಕಾರಿ ಮನೋಭಾವ ಸರ್ವರಿಗೂ ಮಾದರಿಯಾಗಿದೆ ಎಂದರು.
ಬಂಟರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ವಸಂತ ಶೆಟ್ಟಿ ಅವರು ಮಾತನಾಡಿ, ಸಂಘದ ಕೋಶಾಧಿಕಾರಿಯಾಗಿ ಅನುಪಮ ಸೇವೆ ಸಲ್ಲಿಸಿದ್ದ ರವೀಂದ್ರನಾಥ ಶೆಟ್ಟಿ ಅವರು ಅನೇಕ ಕ್ರೀಡಾಪಟುಗಳಿಗೆ ತಮ್ಮ ಬ್ಯಾಂಕಿನಲ್ಲಿ ಉದ್ಯೋಗ ನೀಡಿ ಸಹೃದಯತೆ ಮೆರೆದವರು. ರಾಮಕೃಷ್ಣ ವಿದ್ಯಾ ಸಂಸ್ಥೆಗೆ ಅವರು ತಮ್ಮ ಬ್ಯಾಂಕ್ ವತಿಯಿಂದ ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು.
ಡಾ.ಆಶಾ ಜ್ಯೋತಿ ರೈ ಅವರು ಮಾತನಾಡಿ, ನಗುಮುಖದ ನಿಷ್ಕಳಂಕ ವ್ಯಕ್ತಿತ್ವದ ರವೀಂದ್ರನಾಥ ಶೆಟ್ಟಿ ಅವರು ಎಲ್ಲರೊಂದಿಗೆ ಬೆರೆಯುವ ಉದಾತ್ತ ಮನೋಭಾವ ಹೊಂದಿದ್ದರು ಎಂದು ಹೇಳಿದರು.
ದಿವಾಕರ ಸಾಮಾನಿ ಚೇಳಾರ್ ಗುತ್ತು ಅವರು ಮಾತನಾಡಿ, ಸಕಾರಾತ್ಮಕ ವ್ಯಕ್ತಿತ್ವಹೊಂದಿದ್ದ ರವೀಂದ್ರನಾಥ ಶೆಟ್ಟಿ ಅವರು ಬಂಟರ ಮಾತೃ ಸಂಘ ಆಯೋಜನೆಯ ಶ್ರೀ ಗಣೇಶೋತ್ಸವದ ಯಶಸ್ಸಿಗೆ ಗಣನೀಯ ಕೊಡುಗೆ ನೀಡಿದ್ದಾರೆ ಎಂದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಕೋಶಾಧಿಕಾರಿ ಸಿ.ಎ.ರಾಮಮೋಹನ ರೈ, ಮಾಜಿ ಕಾರ್ಯದರ್ಶಿ ಎಂ.ಸುಂದರ ಶೆಟ್ಟಿ, ಹಿರಿಯ ಮುಂದಾಳು ಶೆಡ್ಡೆ ಮಂಜುನಾಥ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು. ಉಲ್ಲಾಸ್ ಶೆಟ್ಟಿ ಪೆರ್ಮುದೆ ಕಾರ್ಯಕ್ರಮ ನಿರ್ವಹಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…