ಮಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಪಕ್ಷದಲ್ಲಿ ಗುರುತಿಸಿಕೊಂಡಿರುವ ಬಿಲ್ಲವ ಸಮುದಾಯದ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ತಮ್ಮ ಸಮಾಜ ಸೇವೆಯ ಮೂಲಕ ಜನಪ್ರಿಯತೆ ಗಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಅವರನ್ನು ಕಡೆಗಣಿಸಿದೆ ಎಂಬ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ’ ಎಂದು ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ಜಿಲ್ಲಾ ಸಮಿತಿಯ ರಾಜ್ಯ ಉಪಾಧ್ಯಕ್ಷ ಜಿತೇಂದ್ರ ಸುವರ್ಣ ಹೇಳಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಬಿಲ್ಲವ, ಈಡಿಗ, ನಾಮದಾರಿ ಸಮುದಾಯಗಳು ಅವರ ಜೊತೆ ಇದ್ದಾರೆ. ಹರಿಪ್ರಸಾದ್ ಪರ ಕೆಲಸ ಮಾಡಲು ನಾವು ಸದಾ ಸಿದ್ಧ.
ಪಕ್ಷ ಅವರನ್ನು ನಿರ್ಲಕ್ಷಿಸುವುದು ತರವಲ್ಲ, ನಿರ್ಲಕ್ಷಿಸಿದರೆ ನಾವು ಸುಮ್ಮನಿರುವುದಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅವರ ಶ್ರಮ ಮತ್ತು ಶ್ರಮವಿದೆ. ರಾಷ್ಟ್ರಮಟ್ಟದಲ್ಲಿ ಬೆಳೆದ ಹರಿಪ್ರಸಾದ್ ಅವರಿಗೆ ಅನ್ಯಾಯವಾದರೆ ಸಮಾಜ ಸಹಿಸುವುದಿಲ್ಲ. ಸಮಯ ಮಿಂಚಿಲ್ಲ. ಈಗಲಾದರೂ ಸೂಕ್ತ ಸಚಿವ ಸ್ಥಾನ ಎಂದು ಒತ್ತಾಯಿಸಿದರು. ಸಿದ್ದರಾಮಯ್ಯ ಅವರು ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸುತ್ತೇವೆ. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಸುರೇಶ್ಚಂದ್ರ ಕೋಟ್ಯಾನ್ ಅವರೊಂದಿಗೆ ಪ್ರೇಮನಾಥ ಕೆ, ಲೋಕನಾಥ ಪೂಜಾರಿ, ಸುರೇಶ್, ಶೋಭಕೇಶವ್ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…