ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ.
ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ, ತಾಯಿ ರತ್ನಾವತಿ ಹಾಗೂ ಕುಟುಂಬದವರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಳದ ಅಧಿಕಾರಿಗಳು ಸ್ವಾಗತಿಸಿ ಬರಮಾಡಿಕೊಂಡರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದು ಮಧ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಶ್ರೀ ದೇವಳದ ಮುಖ್ಯ ಅರ್ಚಕರು ತೀರ್ಥ ಪ್ರಸಾದ ನೀಡಿ ಅವರನ್ನ ಗೌರವಿಸಿದರು.
ಅಲ್ಲಿಂದ ಕ್ಷೇತ್ರದ ಆರಾಧ್ಯ ದೈವ ಹೊಸಳಿ ಗಮ್ಮನ ಗುಡಿಗೆ ಭೇಟಿ ನೀಡಿ ದೈವದ ದರ್ಶನ ಪಡೆದಿದ್ದಾರೆ. ಕಾಂತಾರ ಚಿತ್ರದ ಮೂಲಕ ಜನಮನಗಳಿಸಿದ ರಿಷಬ್ ಶೆಟ್ಟಿಯವರು ಕುಕ್ಕೆ ಕ್ಷೇತ್ರಕ್ಕೆ ಎರಡನೇ ಬಾರಿ ಆಗಮಿಸಿದ್ದು ದೇವರ ದರ್ಶನ ಪಡೆದು ಧನ್ಯರಾದರು. ಮೊದಲನೇ ಬಾರಿ ಕ್ಷೇತ್ರಕ್ಕೆ ಆಗಮಿಸಿದಾಗ ಇಲ್ಲಿ ತುಲಾಭಾರ ಸೇವೆಯನ್ನು ಕೂಡ ಸಲ್ಲಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…