ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ ಸಂಭವಿಸಿದೆ.

ಕೋಟೇಶ್ವರ ಗಾಂಧಿ ನಗರದ ನಿವಾಸಿ, ದಿವಂಗತ ಅವರ ಪತ್ನಿ ಅಲಿಮಾಬಿ ಮೃತಪಟ್ಟ ದುರ್ದೈವಿ. ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಅಲಿಮಾಬಿ ಪಾಲ್ಗೊಂಡಿದ್ದರು. ಸಮಾರಂಭ ಮುಗಿಸಿ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮನೆಗೆ ಮರಳಲು ಇತರ ಮೂವರು ಮಹಿಳೆಯರೊಂದಿಗೆ ರಸ್ತೆ ದಾಟುತ್ತಿದ್ರು, ಈ ಸಂದರ್ಭದಲ್ಲಿ ಮಂಗಳೂರಿನಿಂದ ಬಾದಾಮಿ-ಐಹೊಳೆ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದು ಮಹಿಳೆಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ತಲೆ ಹಾಗೂ ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ಅಲಿಮಾಬಿ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಅಲಿಮಾಬಿ ಅವರಿಗೆ ನಾಲ್ವರು ಗಂಡು ಹಾಗೂ ಓರ್ವ ಪುತ್ರಿ ಇದ್ದಾರೆ. ಇವರಲ್ಲಿ ಒಂದು ಹೆಣ್ಣು ಹಾಗೂ ಓರ್ವ ಗಂಡು ಮಕ್ಕಳು ಬುದ್ಧಿಮಾಂದ್ಯರಾಗಿದ್ದು, ಅಲಿಮಾಬಿ ಅವರೇ ಈ ಇಬ್ಬರು ಮಕ್ಕಳ ಪೋಷಣೆ ಮಾಡುತ್ತಿದ್ದರು. ಹಗಲಿರುಳು ಈ ಮಕ್ಕಳ ಹಾರೈಕೆಯಲ್ಲೇ ತೊಡಗಿದ್ದ ತಾಯಿಯ ಅಗಲಿಕೆಯಿಂದಾಗಿ, ಈಗ ಈ ಅಸಹಾಯಕ ಮಕ್ಕಳು ಸಂಪೂರ್ಣ ಅನಾಥರಾಗಿದ್ದು, ಅವರ ಭವಿಷ್ಯ ಅತಂತ್ರವಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಮರುಕ ಉಂಟುಮಾಡಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!