ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ ಸಂಭವಿಸಿದೆ.
ಕೋಟೇಶ್ವರ ಗಾಂಧಿ ನಗರದ ನಿವಾಸಿ, ದಿವಂಗತ ಅವರ ಪತ್ನಿ ಅಲಿಮಾಬಿ ಮೃತಪಟ್ಟ ದುರ್ದೈವಿ. ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಅಲಿಮಾಬಿ ಪಾಲ್ಗೊಂಡಿದ್ದರು. ಸಮಾರಂಭ ಮುಗಿಸಿ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮನೆಗೆ ಮರಳಲು ಇತರ ಮೂವರು ಮಹಿಳೆಯರೊಂದಿಗೆ ರಸ್ತೆ ದಾಟುತ್ತಿದ್ರು, ಈ ಸಂದರ್ಭದಲ್ಲಿ ಮಂಗಳೂರಿನಿಂದ ಬಾದಾಮಿ-ಐಹೊಳೆ ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದು ಮಹಿಳೆಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ತಲೆ ಹಾಗೂ ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ಅಲಿಮಾಬಿ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಅಲಿಮಾಬಿ ಅವರಿಗೆ ನಾಲ್ವರು ಗಂಡು ಹಾಗೂ ಓರ್ವ ಪುತ್ರಿ ಇದ್ದಾರೆ. ಇವರಲ್ಲಿ ಒಂದು ಹೆಣ್ಣು ಹಾಗೂ ಓರ್ವ ಗಂಡು ಮಕ್ಕಳು ಬುದ್ಧಿಮಾಂದ್ಯರಾಗಿದ್ದು, ಅಲಿಮಾಬಿ ಅವರೇ ಈ ಇಬ್ಬರು ಮಕ್ಕಳ ಪೋಷಣೆ ಮಾಡುತ್ತಿದ್ದರು. ಹಗಲಿರುಳು ಈ ಮಕ್ಕಳ ಹಾರೈಕೆಯಲ್ಲೇ ತೊಡಗಿದ್ದ ತಾಯಿಯ ಅಗಲಿಕೆಯಿಂದಾಗಿ, ಈಗ ಈ ಅಸಹಾಯಕ ಮಕ್ಕಳು ಸಂಪೂರ್ಣ ಅನಾಥರಾಗಿದ್ದು, ಅವರ ಭವಿಷ್ಯ ಅತಂತ್ರವಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಮರುಕ ಉಂಟುಮಾಡಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…