ಗೂಡ್ಸ್ ರಿಕ್ಷಾ ಹಾಗೂ ದ್ವಿಚಕ್ರವಾಹನದ ನಡುವೆ ನಡೆದ ಅಪಘಾತಕ್ಕೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ ನಡೆದಿದೆ.
ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ ಮೃತಪಟ್ಟ ಯುವಕನಾಗಿದ್ದಾನೆ. ಮೆಲ್ಕಾರ್ ಕಡೆಯಿಂದ ಸ್ನೇಹಿತ ಉದಯ ಎಂಬವರ ಜೊತೆ ಕುಕ್ಕಾಜೆ ಮನೆಯ ಕಡೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಹಸವಾರನಾಗಿದ್ದ ಮನೀಶ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಸವಾರ ಉದಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಆದರ್ಶ್ ಬೇಟಿ ನೀಡಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…