ಹುಣಸೂರು ತಾಲೂಕಿನ ಹನಗೋಡು ಗ್ರಾಮದ ಫರ್ಮಾನ್ ಪಾಷಾ ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಂಚವಳ್ಳಿ ಗ್ರಾಮದಲ್ಲಿ ಕಾರ್ ಗ್ಯಾರೇಜ್ ನಡೆಸುತ್ತಿದ್ದ ಫರ್ಮಾನ್ ಪಾಷಾ, ಮೈಸೂರಿನ ಬಿಳಿಕೆರೆ ಗ್ರಾಮದ ಆಫ್ರಿನ್ ಮತ್ತು ಆಕೆಯ ಸಹೋದರ ಸಲ್ಮಾನ್ ರನ್ನು ಭೇಟಿ ಮಾಡಲು ಹೋಗುತ್ತಿರುವುದಾಗಿ ತಂದೆಗೆ ತಿಳಿಸಿ ಮನೆಯಿಂದ ಹೊರಟಿದ್ದರು. ಬಳಿಕ ಫರ್ಮಾನ್ ಪಾಷಾ, ಜಾಜಿರ್ ಎಂಬ ವ್ಯಕ್ತಿಯ ಮೂಲಕ ದೂರವಾಣಿ ಕರೆ ಮಾಡಿ ತನ್ನ ಸ್ನೇಹಿತರಿಗೆ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾನೆ.
ನಂತರ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಈ ಕುರಿತು ಮೃತನ ತಂದೆ ಮುನೀರ್ ಪಾಷಾ ಅವರು ನನ್ನ ಮಗನ ಸಾವಿನ ಬಗ್ಗೆ ಅನುಮಾನವಿದೆ. ಸೂಕ್ತ ತನಿಖೆ ನಡೆಸಿ ಎಂದು ಆಗ್ರಹಿಸಿ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಬಿಳಿಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…